ಹನೂರು | ಬೈಕಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಚಾಮರಾಜನಗರ: ಬೈಕಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕ್ರಿಶ್ಚಿಯನ್ ಕಾಲನಿಯ ನಿವಾಸಿ ಜೀವನ್(18) ಮೃತಪಟ್ಟವರು.
ಜೀವನ್ ಬೈಕಿನಲ್ಲ ತನ್ನ ಮನೆಯತ್ತ ತೆರಳುತ್ತಿದ್ದಾಗ ಮಹದೇಶ್ವರ ಬೆಟ್ಟದ ಕಡೆಯಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಜೀವನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ನಂತರ ಸ್ಥಳೀಯರು ಬಸ್ಸನ್ನು ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.
ಮಾಹಿತಿ ತಿಳಿಯುತ್ತಿದ್ದಂತೆಯೇ ರಾಮಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಗೊಳಿಸಿದರು.
Next Story





