ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ವಿತರಣೆ

ತಾಲೂಕು ಆಡಳಿತದಿಂದ ತಲಾ 5 ಲಕ್ಷ ರೂ., ಶಾಸಕರಿಂದ ವೈಯಕ್ತಿಕವಾಗಿ ತಲಾ 10 ಲಕ್ಷ ರೂ. ನೆರವು
ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ಸಮೀಪದ ಮರಿಯಮಂಗಲ ಬೀಟ್ ನಲ್ಲಿ ಸ್ವಾತಂತ್ರ್ಯ ದಿನದಂದು ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ವಿತರಿಸಲಾಯಿತು.
ತೊಮಿಯರ್ ಪಾಳ್ಯಕ್ಕೆ ಸೋಮವಾರ ಬೆಳಗ್ಗೆ ತೆರಳಿದ ತಹಶೀಲ್ದಾರ್ ಚೈತ್ರಾ ಅವರು ತಾಲೂಕು ಆಡಳಿತದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ವಿತರಿಸಿದರು.
ಇದೇವೇಳೆ ಶಾಸಕ ಎಂ.ಆರ್. ಮಂಜುನಾಥ್ ವೈಯಕ್ತಿಕವಾಗಿ ತಲಾ 10 ಲಕ್ಷ ರೂ. ನೆರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ರವಿವಾರ ನೀಡಿದ್ದ ಭರವಸೆಯಂತೆ ಪರಿಹಾರ ವಿತರಿಸಿದ ಶಾಸಕ ಮಂಜುನಾಥ್, ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಬಳಿಕ ಮೃತದೇಹಗಳ ಅಂತಿಮ ದರ್ಶನ ಪಡೆದರು.
ಹನೂರು ವನ್ಯಜೀವಿ ವಲಯದ ಶಾಗ್ಯ ವ್ಯಾಪ್ಯಿಯ ಹೊಳೆಮುರದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ಮೂವರು ಬಲಿಯಾಗಿದ್ದರು.
Next Story




