ಹನೂರು: ಶೂಟೌಟ್ ಪ್ರಕರಣ; ಪ್ರತಿಭಟನೆ ವೇಳೆ ಗಲಾಟೆ ನಡೆಸಿದ ಐವರು ಪೊಲೀಸ್ ವಶಕ್ಕೆ

ಹನೂರು: ಮೂವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ಪೊಲೀಸ್ ಠಾಣೆ ಎದುರು ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕೆಲ ಯುವಕರು ಪೊಲೀಸರೊಂದಿಗೆ ಗಲಾಟೆ ನಡೆಸಿ ಹಲ್ಲೆಗೆ ಮುಂದಾಗಿರುವ ಬಗ್ಗೆ ವರದಿಯಾಗಿದೆ.
ಪರಿಸ್ಥಿತಿ ನಿಯಂತ್ರಿಸಿದ ಪೊಲೀಸರು ಹಲ್ಲೆ ಆರೋಪದ ಮೇಲೆ ಐವರು ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಬಳಿಕ ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರಿಸಲು ಪೊಲೀಸರು ಅವಕಾಶ ಮಾಡಿಕೊಟ್ಟರು ಎಂದು ತಿಳಿದು ಬಂದಿದೆ.
Next Story




