ಹನೂರು ಶೂಟೌಟ್ ಪ್ರಕರಣ; ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ FIR ದಾಖಲು

ಹನೂರು ಪೊಲೀಸ್ ಠಾಣೆ ಮುಂದೆ ಗ್ರಾಮಸ್ಥರಿಂದ ಪ್ರತಿಭಟನೆ
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವಾಪ್ತಿಯ ಮರಿಯ ಮಂಗಲ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
ಪ್ರಾಣಿ ಬೇಟೆಗೆ ಬಂದಿದ್ದಾರೆಂದು ಅರಣಾಧ್ಯಿಕಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಮೃತ ಆಥೋಣಿಸಾಮಿ ಪತ್ನಿ ಲೂರ್ದಾಮೇರಿ ದೂರಿನ ಆಧಾರದಲ್ಲಿ ಚಾಮರಾಜನಗರದ ಹನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದಕ್ಷಿಣ ವಲಯ ಐಜಿ ಬೋರಲಿಂಗೇಗೌಡ, ಚಾಮರಾಜನಗರ ಎಸ್ಪಿ ಮುತ್ತುತಾಜು ಸಮ್ಮುಖದಲ್ಲಿ ಅರಣ್ಯ ಅಧಿಕಾರಿಗಳು ಹನೂರು ವಿಭಾಗ ಎಂದು ಆರೋಪಿಗಳನ್ನಾಗಿಸಿ ಕೇಸ್ ದಾಖಲಿಸಲಾಗಿದೆ. ನಿರ್ದಿಷ್ಟ ಹೆಸರು ನಮೂದಿಸದೇ ಅರಣ್ಯ ಅಧಿಕಾರಿಗಳು ಎಂದು ಎಫ್ಐಆರ್ನಲ್ಲಿ ನಮೂದಿಸಲಾಗಿದೆ. ಬಿಎನ್ ಎಸ್ 103(1) ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
Next Story




