Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಹನೂರು ಶೂಟೌಟ್ ಪ್ರಕರಣ: ಮರಣೋತ್ತರ...

ಹನೂರು ಶೂಟೌಟ್ ಪ್ರಕರಣ: ಮರಣೋತ್ತರ ಪರೀಕ್ಷೆ ನಂತರ ಮೈಸೂರಿನಿಂದ ಸ್ವಗ್ರಾಮಕ್ಕೆ ಮೃತದೇಹಗಳ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ16 Aug 2026 9:26 PM IST
share
ಹನೂರು ಶೂಟೌಟ್ ಪ್ರಕರಣ: ಮರಣೋತ್ತರ ಪರೀಕ್ಷೆ ನಂತರ ಮೈಸೂರಿನಿಂದ ಸ್ವಗ್ರಾಮಕ್ಕೆ ಮೃತದೇಹಗಳ ಸ್ಥಳಾಂತರ

ಮೈಸೂರು : ಇಲ್ಲಿನ ಮೈಸೂರು ಕೆ.ಆರ್.ಆಸ್ಪತ್ರೆ ವೈದ್ಯಕೀಯ ಕಾಲೇಜಿನ ಶವಗಾರಕ್ಕೆ ಚಾಮರಾಜನಗರ ಜಿಲ್ಲೆ ಹನೂರಿನಿಂದ ತರಲಾಗಿದ್ದ ಎನ್‌ಕೌಂಟರ್‌ ನಿಂದ ಮೃತಪಟ್ಟವರ ದೇಹವನ್ನು ರವಿವಾರ ಸಂಜೆ ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ ವಾರಸುದಾರರೊಂದಿಗೆ ಮೃತರ ಸ್ವಗ್ರಾಮಕ್ಕೆ ಸ್ಥಳಾಂತರಿಸಲಾಯಿತು.

ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಮೂವರ ಮೃತ ದೇಹವನ್ನು ಕೊಳ್ಳೇಗಾಲ ಪೊಲೀಸರು ಶನಿವಾರ ಬೆಳಗ್ಗೆ ಮೈಸೂರಿನ ಮೆಡಿಕಲ್ ಕಾಲೇಜಿನ ಶವಗಾರಕ್ಕೆ ತಂದಿರಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆಗೆ ಘಟನೆ ಸಂಬಂಧ ಪ್ರಕರಣ ದಾಖಲಾಗದಿರುವುದು ಹಾಗೂ ಮೃತರ ಪೋಷಕರು ಅನುಮತಿ ನಿರಾಕರಿಸಿದ್ದರಿಂದ ಶನಿವಾರ ಮರಣೋತ್ತರ ಪರೀಕ್ಷೆ ನಡೆದಿರಲಿಲ್ಲ. ಬಳಿಕ ರವಿವಾರವೂ ವಿವಿಧ ಬೇಡಿಕೆಗೆ ಆಗ್ರಹಿಸಿ ಪಟ್ಟು ಹಿಡಿದ ಮೃತರ ಕುಟುಂಬದವರು ಸಂಜೆವರೆಗೂ ಶವ ಪರೀಕ್ಷೆಗೆ ಅನುಮತಿ ನೀಡಲಿಲ್ಲ. ಕೊನೆಗೂ ಅಧಿಕಾರಿಗಳು ಮೃತರ ಕುಟುಂಬದವರ ಮನವೊಲಿಸಿ ರಾತ್ರಿ 8 ಗಂಟೆ ವೇಳೆಗೆ ಮೂವರ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸುವಲ್ಲಿ ಯಶಸ್ವಿಯಾದರು.

ಪೊಲೀಸರು ರವಿವಾರ ಬೆಳಗ್ಗಿನಿಂದಲೆ ಮರಣೋತ್ತರ ಪರೀಕ್ಷೆ ನಡೆಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತಾದರೂ, ಮಹಜರು ಪ್ರಕ್ರಿಯೆಗೆ ಸಹಿ ಮಾಡಲು ಪೋಷಕರು ಹಿಂದೇಟು ಹಾಕಿದರು. ಪೊಲೀಸರು ಎಷ್ಟೇ ಮನವಿ ಮಾಡಿದರೂ ಪೋಷಕರು ಮಾತ್ರ ಮಹಜರು ಪ್ರಕ್ರಿಯೆಯಿಂದ ದೂರವುಳಿದರು. ಇದರಿಂದ ಮರಣೋತ್ತರ ಪರೀಕ್ಷೆಗೆ ಮತ್ತೆ ಹಿನ್ನಡೆಯಾಯಿತು.

ಸ್ಥಳಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಬರಬೇಕು. ಅಲ್ಲದೆ, ಕಾವೇರಿ ವನ್ಯಧಾಮದ ಅರಣ್ಯಾಧಿಕಾರಿಗಳು ಬರಬೇಕು ಎಂದು ಬಿ️ಗಿಪಟ್ಟು ಹಿಡಿದರು.

ಗುಂಡೇಟಿನಿಂದ ಮೃತಪಟ್ಟ ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೂ ಮುನ್ನ ನಿಯಮಾನುಸಾರ ಸ್ಕ್ಯಾನಿಂಗ್ ಮಾಡಿಸಿ, ದೇಹದಲ್ಲಿ ಗುಂಡು ಇರುವಿಕೆ ಪತ್ತೆ ಮಾಡಲು ಪೊಲೀಸರು ಮುಂದಾದರು. ಆದರೆ, ಸಂಬಂಧಿಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಬಳಿಕ ಪೊಲೀಸರು ನಿಯಮಾನುಸಾರ ಮರಣೋತ್ತರ ಪರೀಕ್ಷೆಗೂ ಮುನ್ನ ಸ್ಕ್ಯಾನಿಂಗ್ ಮಾಡಿಸಬೇಕಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಬಳಿಕ ಶವಗಾರದಿಂದ ಕೆ.ಆರ್.ಆಸ್ಪತ್ರೆಯ ಸ್ಕ್ಯಾನಿಂಗ್ ವಿಭಾಗಕ್ಕೆ ಶವ ಸಾಗಿಸಿ ಸ್ಕ್ಯಾನಿಂಗ್ ಮಾಡಿಸಿ ಮತ್ತೆ ಶವಾಗಾರಕ್ಕೆ ಮೃತದೇಹಗಳ್ನು ತಂದರು.

ಸಂಜೆ ನಂತರ ಶವಪರೀಕ್ಷೆ: ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಅರಣ್ಯ ಸಿಬ್ಬಂದಿ ವಿರುದ್ಧ ಎಫ್‌ಐಆರ್ ಆಗಿದೆ. ತನಿಖೆ ಸಮಗ್ರವಾಗಿ ನಡೆಸಬೇಕಾದರೆ ಮರಣೋತ್ತರ ಪರೀಕ್ಷಾ ವರದಿ ಅಗತ್ಯವಾಗಿದೆ ಎಂದು ಪೊಲೀಸರು ಮನವರಿಕೆ ಮಾಡಿಕೊಟ್ಟ ಬಳಿಕ ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ಸೂಚಿಸಿದರು. ನಂತರ ಸಂಜೆ ಮರಣೋತ್ತರ ಪ್ರಕ್ರಿಯೆ ಆರಂಭವಾಯಿತು. ಮೂವರ ಮರಣೋತ್ತರ ಪರೀಕ್ಷೆ ಮುಗಿಯುವ ವೇಳೆಗೆ ರಾತ್ರಿ 8 ಗಂಟೆ ಆಗಿತ್ತು. ಆದರೂ, ಮೂರು ಪ್ರತ್ಯೇಕ ಆಂಬ್ಯುಲೆನ್ಸ್ನಲ್ಲಿ ಬಿ️ಗಿ ಭದ್ರತೆಯೊಂದಿಗೆ ಮೃತದೇಹವನ್ನು ಸ್ಥಳಾಂತರಿಸಲಾಯಿತು.

Tags

Hanuru shootout case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X