Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ9 Sept 2026 11:50 PM IST
share
ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಮಂಜೂರು

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಹೊಳೆ ಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಜಿಲ್ಲೆಯ ಕೊಳ್ಳೇಗಾಲ ನ್ಯಾಯಾಲಯದ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಅರಣ್ಯ ರಕ್ಷಕ ಶಿವರಾಜ್ ಸಾಸಲವಾಡೆ, ವಾಚರ್‌ಗಳಾದ ಶಿವಲಿಂಗ ನಾಯ್ಕ ಮತ್ತು ಗಿರೀಶ್ ಅವರಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಕೊಳ್ಳೇಗಾಲದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸ್ವಾತಂತ್ರ್ಯ ದಿನಾಚರಣೆಯ ಮುಂಜಾನೆ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹೊಳೆ ಮುರಿದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮರಿಯಮಂಗಲ ಗ್ರಾಮದ ಅಂತೋಣಿಸ್ವಾಮಿ, ಲಾಸರ್ ದೊಡ್ಡಿ ಗ್ರಾಮದ ಡೇವಿಡ್ ಕುಮಾರ್ ಮತ್ತು ಜಗನ್ನಾಥ್ ದೊಡ್ಡಿ ಗ್ರಾಮದ ಜಾನ್ ರೋಸ್ ಪೀಟರ್ ಎಂಬವರು ಮೃತಪಟ್ಟಿದ್ದರು.

ಗುಂಡು ಹಾರಿಸಿದ್ದಾರೆ ಎನ್ನಲಾದ ಅರಣ್ಯ ರಕ್ಷಕ ಶಿವರಾಜ್ ಸಾಸಲವಾಡೆ, ವಾಚರ್‌ಗಳಾದ ಶಿವಲಿಂಗ ನಾಯ್ಕ, ಗಿರೀಶ್ ಹಾಗೂ ಇತರ ಸಿಬ್ಬಂದಿಯನ್ನು ಸಿಐಡಿ ಎಸ್‌ಪಿ ಉಮಾ ಪ್ರಶಾಂತ್ ವಿಚಾರಣೆಗೆ ಒಳಪಡಿಸಿದ್ದರು.ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿದರು. ಕೆಲವೊಂದು ಷರತ್ತು ವಿಧಿಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜಾಮೀನು ಪಡೆದಿರುವ ಅರಣ್ಯ ಸಿಬ್ಬಂದಿ 25 ದಿನದೊಳಗಾಗಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು.ತನಿಖಾ ಅವಧಿಯಲ್ಲಿ ಸಹಕರಿಸಬೇಕು. ಪ್ರತಿ ಶನಿವಾರ ಪೊಲೀಸ್ ಠಾಣೆಯಲ್ಲಿ ಹಾಜರಾತಿ ದಾಖಲಿಸಬೇಕು. ಸಾಕ್ಷಿದಾರರಿಗೆ ಬೆದರಿಕೆ, ಆಮಿಷ ಒಡ್ಡದಂತೆ ಸೂಚನೆ ಅಲ್ಲದೇ ಬಾಂಡ್ ಕೊಡುವ ವೇಳೆ ವಾಸಸ್ಥಳದ ದೃಢೀಕೃತ ಪುರಾವೆ ಕೊಡಬೇಕು ಎಂಬ ಷರತ್ತು ವಿಧಿಸಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ಸಂತ್ರಸ್ತರ ಅಸಮಾಧಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯ ಜೀವಿಧಾಮದ ಮರಿಮಂಗಲದ ಶೂಟೌಟ್ ಪ್ರಕರಣದ ಬೆನ್ನಲ್ಲೇ ಕೊಳ್ಳೇಗಾಲ ನ್ಯಾಯಾಲಯವು ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದಕ್ಕೆ ಮೃತರ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವುದಾಗಿ ತಿಳಿಸಿರುವ ಮೃತ ಕುಮಾರ್ ಅವರ ಪತ್ನಿ ಡೋಮಿನಾ, ಜಾಮೀನು ಮಂಜೂರು ಮಾಡಿರುವ ಕ್ರಮದಿಂದ ತಮಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.

‘ನ್ಯಾಯಕ್ಕಾಗಿ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿರುವ ಅವರು, ಪ್ರಕರಣದಲ್ಲಿ ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಬೇಕು ಹಾಗೂ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X