ಕೊಳ್ಳೇಗಾಲ : ಸೇತುವೆಗೆ ಕಾರು ಢಿಕ್ಕಿ; ಇಬ್ಬರು ಮೃತ್ಯು

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ತಡೆಗೋಡೆಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ಕೊಳ್ಳೇಗಾಲ ನ್ಯಾಯಾಲಯ ಶಿರಸ್ತೆದಾರ ನಂಜುಂಡಪ್ಪ ಹಾಗೂ ಸಿಬ್ಬಂದಿ ಯಮುನಪ್ಪ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಕೃಷ್ಣಪ್ಪ, ಲೋಕೇಶ್ ಹಾಗೂ ಶಂಕರಪ್ಪ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿ, ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
Next Story




