ಕೊಳ್ಳೇಗಾಲ | ಕೆರೆಯ ತಡೆಗೋಡೆಗೆ ಬೈಕ್ ಢಿಕ್ಕಿ : ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಕೊಳ್ಳೇಗಾಲ : ಕೆರೆ ಸುತ್ತಲೂ ಅಳವಡಿಸಿರುವ ತಡೆಗೋಡೆಗೆ ಬೈಕ್ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧುವನಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಕಾಮಗೆರೆ ಗ್ರಾಮದ ಪವನ್ (19) ಮೃತಪಟ್ಟಿದ್ದು, ವಿಶ್ವ(20) ತೀವ್ರವಾಗಿ ಗಾಯಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರ ರಾತ್ರಿ ಕೊಳ್ಳೇಗಾಲದಿಂದ ಕಾಮಗೆರೆಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಮಧುವನಹಳ್ಳಿ ಹೊರವಲಯದ ಕೆರೆಗೆ ಅಳವಡಿಸಿದ್ದ ತಡೆಗೋಡೆಗೆ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story