ಗಂಗನದೊಡ್ಡಿಯಲ್ಲಿ ಚಿರತೆ ಹಾವಳಿ: ಥರ್ಮಲ್ ಡ್ರೋನ್ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸೊಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಥರ್ಮಲ್ ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸೊಳೇರಿಪಾಳ್ಯ ಗ್ರಾಮ ಪಂಚಾಯ್ತಿಯ ಗಂಗನದೊಡ್ಡಿ ಗ್ರಾಮದ ಭಾಸ್ಕರ್ ಅವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕಳೆದ ಒಂದು ವರ್ಷದಿಂದ ಈ ಪ್ರದೇಶದಲ್ಲಿ ದನ–ಕರುಗಳು ಚಿರತೆಯ ಬಲಿಯಾಗುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಚಿರತೆ ಹಾವಳಿಯಿಂದ ಆತಂಕಗೊಂಡ ಗಂಗನದೊಡ್ಡಿ ಗ್ರಾಮದ ರೈತರು ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಅತಿ ಶೀಘ್ರದಲ್ಲಿ ಚಿರತೆಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಡರಾತ್ರಿ 11 ಗಂಟೆ ಸುಮಾರಿಗೆ ಥರ್ಮಲ್ ಡ್ರೋನ್ ಮೂಲಕ ನಡೆಸಿದ ಕಾರ್ಯಾಚರಣೆಯಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಶೀಘ್ರದಲ್ಲೇ ಚಿರತೆಯನ್ನು ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
Next Story




