ಗುಂಡ್ಲುಪೇಟೆಯಲ್ಲಿ ಕೇರಳಂ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಚಾಮರಾಜನಗರ : ಗುಂಡ್ಲುಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೇರಳಂ ರಾಜ್ಯದ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಆತನಿಂದ ಒಂದು ಲಕ್ಷದ ಇಪ್ಪತ್ತು ಸಾವಿರ ರೂ. ಮೌಲ್ಯದ 1200 ಲಾಟರಿ ಟಿಕೇಟನ್ನು ಜಪ್ತಿ ಪಡಿಸಿಕೊಂಡಿದ್ದಾರೆ.
ಚಾಮರಾಜನಗರ ಪಟ್ಟಣದ ಗಾಳೀಪುರದ ನಿವಾಸಿ ಅಬೀವುಲ್ಲಾ ಬಿನ್ ಅಬ್ದುಲ್ ವಾಕಬ್ ಬಂಧಿತ ಆರೋಪಿ. ಈತ ಗುಂಡ್ಲುಪೇಟೆ ಪಟ್ಟಣದಲ್ಲಿ ಅಕ್ರಮವಾಗಿ ಕೇರಳಂ ರಾಜ್ಯದ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಗುಂಡ್ಲುಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಜಯಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story




