Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಅಕ್ರಮ ಹೋಂ ಸ್ಟೇ, ರೆಸಾರ್ಟ್‌ಗೆ ಅವಕಾಶ...

ಅಕ್ರಮ ಹೋಂ ಸ್ಟೇ, ರೆಸಾರ್ಟ್‌ಗೆ ಅವಕಾಶ ನೀಡುವುದಿಲ್ಲ : ಸಚಿವ ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ2 Nov 2025 7:50 PM IST
share
ಅಕ್ರಮ ಹೋಂ ಸ್ಟೇ, ರೆಸಾರ್ಟ್‌ಗೆ ಅವಕಾಶ ನೀಡುವುದಿಲ್ಲ : ಸಚಿವ ಈಶ್ವರ್‌ ಖಂಡ್ರೆ

ಚಾಮರಾಜನಗರ : ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಅಕ್ರಮ ಹೋಂ ಸ್ಟೇ ಅಥವಾ ರೆಸಾರ್ಟ್ ಗಳಿಗಾಗಲೀ, ಅಕ್ರಮ ಕಲ್ಲು ಗಣಿಗಾರಿಕೆಗಾಗಲೀ ನಮ್ಮ ಸರಕಾರ ಅವಕಾಶ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಅರಣ್ಯ ಸಮಸ್ಯೆ ಕುರಿತಂತೆ ರೈತರು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ, ಹೋಂ ಸ್ಟೇ, ರೆಸಾರ್ಟ್ ನಡೆಯುತ್ತಿದ್ದರೆ ಸ್ಪಷ್ಟ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವ ಭರವಸೆ ನೀಡಿದರು.

ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದ್ದಲ್ಲ. ನೂರಾರು, ಸಾವಿರಾರು ವರ್ಷದಿಂದ ಇದೆ. ಈಗ ವನ್ಯಜೀವಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಇದರಿಂದ ಸಂಘರ್ಷ ಹೆಚ್ಚಳವಾಗುತ್ತಿದ್ದು, ಸ್ಥಳೀಯರ, ಸಾರ್ವಜನಿಕರ, ರೈತರ ಸಲಹೆ, ಅಭಿಪ್ರಾಯ ಪಡೆದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ಸಭೆ ನಡೆಸಲಾಗಿದೆ ಎಂದರು.

ಈಗಾಗಲೇ ಇಲಾಖೆಯ ವತಿಯಿಂದ 2 ತಜ್ಞರ ಸಮಿತಿ ರಚಿಸಲಾಗಿದ್ದು, ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಅಧ್ಯಯನ ಮಾಡಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಇದರ ಜೊತೆಗೆ ಇಂದಿನ ಸಭೆಯಲ್ಲಿ ರೈತರು, ಸಾರ್ವಜನಿಕರು ನೀಡಿರುವ ಎಲ್ಲ ಸಲಹೆ ಕ್ರೋಡೀಕರಿಸಿ, ಚರ್ಚಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದರು.

ವನ್ಯಜೀವಿಯಿಂದ ಬೆಳೆ ಹಾನಿ. ಜಾನುವಾರಗಳ ಹಾನಿ ಆದಾಗ ಪರಿಹಾರ ಹೆಚ್ಚಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಹುಲಿಗಳಿದ್ದವು. ಇಂದು 153ಕ್ಕೂ ಹೆಚ್ಚು ಹುಲಿಗಳಿವೆ. ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗಿದೆ. ಹುಲಿಗಳಿಗೆ ಅರಣ್ಯ ಪ್ರದೇಶ ಕಡಿಮೆ ಆಗಿರುವುದರಿಂದ ಸಮಸ್ಯೆ ಉಲ್ಬಣಿಸಲು ಕಾರಣವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ವನ್ಯಜೀವಿಗಳ ದಾಳಿಗೆ ಸರಾಸರಿ 55-60 ಜನರು ಸಾವಿಗೀಡಾಗುತ್ತಿದ್ದಾರೆ. 2021-22ರ ಸಾಲಿನಲ್ಲಿ 41 ಜನರು ಮೃತಪಟ್ಟಿದ್ದರು. ಈ ಪೈಕಿ ಆನೆ ದಾಳಿಯಿಂದ 28, ಹುಲಿ ದಾಳಿಯಿಂದ ಇಬ್ಬರು ಮತ್ತು ಇತರ ಪ್ರಾಣಿಗಳ ದಾಳಿಯಿಂದ 11 ಜನರು ಮೃತಪಟ್ಟಿದ್ದರು. 2022-23ನೇ ಸಾಲಿನಲ್ಲಿ 57 ಜನರು ವನ್ಯಜೀವಿ ದಾಳಿಯಿಂದ ಸಾವಿಗೀಡಾಗಿದ್ದಾರೆ. ಆನೆ ದಾಳಿಗೆ 32 ಜನರು ಮೃತಪಟ್ಟಿದ್ದರೆ, ಹುಲಿ ದಾಳಿಯಿಂದ 5 ಜನರು ಅಸುನೀಗಿದ್ದರು. 2023-24ನೇ ಸಾಲಿನಲ್ಲಿ ಒಟ್ಟು 65 ಜನರು ಮೃತಪಟ್ಟಿದ್ದರು ಈ ಪೈಕಿ ಆನೆ ದಾಳಿಯಿಂದ 48, ಹುಲಿ ದಾಳಿಯಿಂದ 5 ಜನರು ಮೃತಪಟ್ಟಿದ್ದರು. 2024-25ನೇ ಸಾಲಿನಲ್ಲಿ 46 ಜನರು ಸಾವಿಗೀಡಾಗಿದ್ದು, ಆನೆ ದಾಳಿಯಿಂದ 36 ಜನರು ಹುಲಿ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು. ಈ ಸಾಲಿನಲ್ಲಿ ಅಂದರೆ 2025-26ರಲ್ಲಿ ಈವರೆಗೆ 30 ಜನರು ವನ್ಯಜೀವಿ ದಾಳಿಗೆ ಬಲಿಯಾಗಿದ್ದಾರೆ. ಈ ಪೈಕಿ 20 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದರೆ, 4 ಜನರು ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ವಿವರ ನೀಡಿದರು.

ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ :

ಸಾವಿರಾರು ಚದರ ಕಿಲೋ ಮೀಟರ್ ಅರಣ್ಯದ ಸಂಪೂರ್ಣ ಗಸ್ತು ಸಾಧ್ಯವಿಲ್ಲ. ಹೀಗಾಗಿ ಆಧುನಿಕ ತಂತ್ರಜ್ಞಾನ ಬಳಸಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಮತ್ತು ವನ್ಯಜೀವಿಗಳನ್ನು ಮರಳಿ ಕಾಡಿಗೆ ಕಳಿಸಲು ಸಮಗ್ರ ಕಮಾಂಡ್ ಕೇಂದ್ರ ರಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಹಿರಿಯ ಅಧಿಕಾರಿಗಳು ಕಚೇರಿಯಲ್ಲಿ ಕೂರದೆ, ಸಂಘರ್ಷ ಇರುವ ಗ್ರಾಮಗಳಿಗೆ ತೆರಳಿ ಸ್ಥಳದಲ್ಲೇ ಮೊಕ್ಕಾಂ ಹೂಡಿ ಸಮಸ್ಯೆ ಪರಿಹರಿಸಬೇಕು ಮತ್ತು ಅರಣ್ಯಾಧಿಕಾರಿಗಳು ಫೋನ್ ಬಂದ್ ಮಾಡದೆ ಜನರಿಗೆ ಸ್ಪಂದಿಸುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಪ್ರತಿಯೊಂದು ಜೀವವೂ ಅಮೂಲ್ಯ. ಒಬ್ಬರೂ ಸಾವಿಗೀಡಾಗಬಾರದು ಎಂಬುದು ಸರಕಾರ ನಿಲುವಾಗಿದೆ. ಆದರೂ ನಮ್ಮ ಕೈ ಮೀರಿ ಇಂತಹ ಘಟನೆಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ನಿಯಂತ್ರಣ ಕಾರ್ಯಪಡೆ ರಚಿಸಲಾಗುತ್ತಿದೆ. ಇದರಲ್ಲಿ ಸ್ಥಳೀಯರನ್ನೂ ಸೇರಿಸಲಾಗುವುದು ಎಂದು ವಿವರಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಶಾಸಕರುಗಳಾದ ಗಣೇಶ್ ಪ್ರಸಾದ್, ಕೃಷ್ಣಮೂರ್ತಿ, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವ ನಾರಾಯಣ್, ಪುಟ್ಟರಂಗಶೆಟ್ಟಿ, ಎಂ.ಎಲ್.ಸಿ. ಮಂಜೇಗೌಡ, ಚಾಮರಾಜ ನಗರ ಜಿಲ್ಲಾಧಿಕಾರಿ ಶಿಲ್ಪನಾಗ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಪಿಸಿಸಿಎಫ್ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X