Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ರಾಜವಂಶಸ್ಥೆ ಪ್ರಮೋದಾದೇವಿ ತಕರಾರು ಅರ್ಜಿ...

ರಾಜವಂಶಸ್ಥೆ ಪ್ರಮೋದಾದೇವಿ ತಕರಾರು ಅರ್ಜಿ ಬೆನ್ನಲ್ಲೇ ಸಿದ್ದಯ್ಯನಪುರವನ್ನು ಕಂದಾಯ ಗ್ರಾಮವಾಗಿಸಲು ಗ್ರಾಮಸ್ಥರ ಮನವಿ

ವಾರ್ತಾಭಾರತಿವಾರ್ತಾಭಾರತಿ14 April 2025 12:13 AM IST
share
ರಾಜವಂಶಸ್ಥೆ ಪ್ರಮೋದಾದೇವಿ ತಕರಾರು ಅರ್ಜಿ ಬೆನ್ನಲ್ಲೇ ಸಿದ್ದಯ್ಯನಪುರವನ್ನು ಕಂದಾಯ ಗ್ರಾಮವಾಗಿಸಲು ಗ್ರಾಮಸ್ಥರ ಮನವಿ

ಚಾಮರಾಜನಗರ : ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಅವರು ಜಿಲ್ಲಾಧಿಕಾರಿಗೆ ತಕರಾರು ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ, ಸಿದ್ದಯ್ಯನಪುರ ಗ್ರಾಮಸ್ಥರು ಕಂದಾಯ ಗ್ರಾಮವನ್ನಾಗಿಸಲು ಮನವಿ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ.

ಚಾಮರಾಜನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿದ್ದಯ್ಯನಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರನ್ನು ಭೇಟಿ ಮಾಡಿ, ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಬೇಕು ಎಂದು ಮನವಿ ಸಲ್ಲಿಸಿದರು. ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನಾಂಗದವರು 75 ವರ್ಷಗಳಿಂದಲೂ ವಾಸವಿದ್ದು, ಸುಮಾರು 1000ಕ್ಕಿಂತಲೂ ಹೆಚ್ಚು ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದಾರೆ. ಸರಕಾರ 210 ಕುಟುಂಬಕ್ಕೆ ತಲಾ 4 ಎಕರೆ ಜಮೀನನ್ನು ಮಂಜೂರು ಮಾಡಿ ಕೊಟ್ಟಿದೆ. ಜಯಚಾಮರಾಜೇಂದ್ರ ಒಡೆಯರ್ ನಮಗೆ 1,035 ಎಕರೆ ಭೂಮಿ ದಾನ ಮಾಡಿದ್ದಾರೆ. 1982ರಲ್ಲಿ ಸಚಿವರಾಗಿದ್ದ ಬಿ.ರಾಚಯ್ಯ ಕಾಲದಲ್ಲಿ ಸರಕಾರ ಸಾಗುವಳಿ ಚೀಟಿ ನೀಡಿದೆ ಎಂದು ಗ್ರಾಮಸ್ಥರು ತಿಳಿಸಿದರು.

ಈಗ ಮೈಸೂರಿನ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ನಮ್ಮ ಊರಿನ ಸರ್ವೇ ನಂಬರ್ ಗಳನ್ನು ಉಲ್ಲೇಖಿಸಿ ಖಾತೆ ಮಾಡಿಕೊಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಇದರಿಂದ ನಮ್ಮ ಗ್ರಾಮಸ್ಥರಿಗೆ ತೊಂದರೆ ಆಗಲಿದೆಯೇ ಎಂದು ಜಿಲ್ಲಾಧಿಕಾರಿ ಬಳಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.

ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಜಿಲ್ಲಾಧಿಕಾರಿಗೆ ಸಲ್ಲಿಸಿರುವ ತಕರಾರು ಅರ್ಜಿ ಸಂಬಂಧ ಆತಂಕದಲ್ಲಿರುವ ಸಿದ್ದಯ್ಯನಪುರ ಗ್ರಾಮಸ್ಥರಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಭಯ ನೀಡಿದ್ದಾರೆ. ಗ್ರಾಮಸ್ಥರಿಂದ ಮನವಿ ಪತ್ರವನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಈಗಾಗಲೇ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ, ಸರಕಾರಿ ಜಾಗ ಎಂದು ಖಚಿತಪಡಿಸಿಕೊಂಡು ಕಂದಾಯ ಗ್ರಾಮವನ್ನಾಗಿ ಘೋಷಣೆ ಮಾಡಲು ಸರಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ. ಪ್ರಮೋದಾದೇವಿ ಒಡೆಯರ್ ಅವರು ತಕರಾರು ಅರ್ಜಿ ಸಲ್ಲಿಸಿದ್ದರೂ ಯಾವುದೇ ಪೂರಕ ದಾಖಲೆಗಳನ್ನು ಒದಗಿಸಿಲ್ಲ. ಆದ್ದರಿಂದ ಗ್ರಾಮಸ್ಥರು ಯಾವುದೇ ಆತಂಕ ಪಡುವುದು ಬೇಡ. ನಿಮ್ಮ ಊರು ಕಂದಾಯ ಗ್ರಾಮಗಳಾಗುವ ಹಂತದಲ್ಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X