Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಆರ್. ಧ್ರುವನಾರಾಯಣ್ ಅವರು ಜನಪರ...

ಆರ್. ಧ್ರುವನಾರಾಯಣ್ ಅವರು ಜನಪರ ರಾಜಕಾರಣದ ಮಾದರಿ ಜನನಾಯಕ: ಸಿ.ಎಂ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 March 2024 4:20 PM IST
share
ಆರ್. ಧ್ರುವನಾರಾಯಣ್ ಅವರು ಜನಪರ ರಾಜಕಾರಣದ ಮಾದರಿ ಜನನಾಯಕ: ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ: ಮಾ 12: ಆರ್. ಧ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು.

ದಿವಂಗತ ಆರ್. ಧ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗವಾಡಿಗೆ ತೆರಳಿ ಧ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಅವರ ಭಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿ ನಿರಂತರ ಪ್ರಯತ್ನ ಮಾಡಿದ್ದ ಧ್ರುವನಾರಾಯಣ್ ಅವರು ಜನರ ಮಧ್ಯ ಓಡಾಡದ ದಿನವೇ ಇಲ್ಲ. ಇವರದ್ದು ಜನಪರ ರಾಜಕಾರಣಕ್ಕೆ ಮಾದರಿ ವ್ಯಕ್ತಿತ್ವ ಎಂದರು.

ಕಾಂಗ್ರೆಸ್ ಸಿದ್ಧಾಂತ ಮತ್ತು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದ ಧ್ರುವನಾರಾಯಣ್ ಅವರು ವಿದ್ಯಾರ್ಥಿ ಅವಧಿಯಿಂದ ಪಕ್ಷದ ಕಾರ್ಯಾಧ್ಯಕ್ಷರಾಗುವವರೆಗೂ ಬೆಳೆದರು. ಶಾಸಕರಾಗಿ, ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದವರು. ಹೀಗಾಗಿ ಇವರ ಅಗಲಿಕೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಕನ್ನಡ ನಾಡಿಗೆ ತುಂಬಲಾರದ ನಷ್ಟ ಆಗಿದೆ ಎಂದರು.

ಅಜಾತಶತ್ರು ಆಗಿದ್ದು ಧ್ರವನಾರಾಯಣ್ ಅವರ ವ್ಯಕ್ತಿತ್ವವನ್ನೇ ಅವರ ಪುತ್ರ ಶಾಸಕ ದರ್ಶನ್ ಧ್ರುವನಾರಾಯಣ್ ಅವರೂ ಹೊಂದಿದ್ದು ಜನಪರತೆ ಬೆಳೆಸಿಕೊಂಡಿದ್ದಾರೆ. ಇವರಿಗೆ ನಾನು ಸಂಪೂರ್ಣ, ಸಹಕಾರ, ಬೆಂಬಲ ನೀಡುತ್ತೇನೆ ಎಂದರು.

ರಾಜಕಾರಣಿಗೆ ಸೈದ್ಧಾಂತಿಕ ಸ್ಪಷ್ಟತೆ ಮತ್ತು ಬದ್ಧತೆ ಅತ್ಯಗತ್ಯ. ಧ್ರುವನಾರಾಯಣ್ ಅವರಿಗೆ ಇವೆರಡೂ ಇತ್ತು. ಸಮಾಜದ ಅಸಮಾನತೆ ಅಳಿಸಲು, ದುರ್ಬಲರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಅವರು ಮಾಡುತ್ತಿದ್ದರು.

ಅಂಬೇಡ್ಕರ್ ಅವರ ಸಂವಿಧಾನದ ಬಗ್ಗೆ ಧ್ರುವನಾರಾಯಣ್ ಅಪಾರವಾದ ನಂಬಿಕೆ, ಗೌರವ ಹೊಂದಿದ್ದರು. ಈಗ ಈ ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಸಂವಿಧಾನ ಉಳಿದರೆ ಮಾತ್ರ ನಾವೂ ನೀವೂ ಉಳಿಯುತ್ತೇವೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ ಮಾದು, ರವಿಶಂಕರ್, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ಮುಖಂಡರು ಮತ್ತು ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X