ಕೊಪ್ಪಳ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಜಾಬಕ್ಷಿ ಎಚ್.ವಿ ಆಯ್ಕೆ

ಕೊಪ್ಪಳ: ಕೊಪ್ಪಳ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ಕೊಪ್ಪಳ ಜಿಲ್ಲೆಯ ಹಿರಿಯ ತರಬೇತುದಾರ ರಾಜಾಬಕ್ಷಿ ಹೆಚ್.ವಿ. ಅವರನ್ನು ನೇಮಕ ಮಾಡಲಾಗಿದೆ.
ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಎಂ.ಸಿ. ಅರುಣ್ ಮಾಚಯ್ಯ ಮತ್ತು ಕಾರ್ಯದರ್ಶಿ ಭಾರ್ಗವ ರೆಡ್ಡಿ ಜೆ. ಅವರು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರು ದಶಕಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಕರಾಟೆ ತರಬೇತಿಯಲ್ಲಿ ತೊಡಗಿಸಿಕೊಂಡಿರುವ ಹಾಗೂ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ಮುಖ್ಯಸ್ಥರಾದ ರಾಜಾಬಕ್ಷಿ ಹೆಚ್.ವಿ. ಅವರು, ಜಿಲ್ಲೆಯಲ್ಲಿ ಉತ್ತಮ ಕರಾಟೆ ಪಟುಗಳನ್ನು ರೂಪಿಸಲು ಹಾಗೂ ಕರಾಟೆ ಶಿಕ್ಷಕರನ್ನು ಸಂಘಟಿಸಿ, ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಕೊಪ್ಪಳ ಜಿಲ್ಲೆಯ ಕ್ರೀಡಾಪಟುಗಳಿಗೆ ಅವಕಾಶ ದೊರಕಿಸಿಕೊಡಲು ಶ್ರಮಿಸಬೇಕೆಂದು ತಿಳಿಸಿದ್ದಾರೆ.
Next Story




