Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಪರೀಕ್ಷಾ ಫಲಿತಾಂಶದ ಜೊತೆ ಸಾಮಾಜಿಕ ಜೀವನದ...

ಪರೀಕ್ಷಾ ಫಲಿತಾಂಶದ ಜೊತೆ ಸಾಮಾಜಿಕ ಜೀವನದ ಫಲಿತಾಂಶವೂ ಅಷ್ಟೇ ಮುಖ್ಯವಾಗಲಿ: ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ21 Jun 2025 2:40 PM IST
share
ಪರೀಕ್ಷಾ ಫಲಿತಾಂಶದ ಜೊತೆ ಸಾಮಾಜಿಕ ಜೀವನದ ಫಲಿತಾಂಶವೂ ಅಷ್ಟೇ ಮುಖ್ಯವಾಗಲಿ: ಕೆ.ವಿ.ಪ್ರಭಾಕರ್

ಮಲೆಮಹದೇಶ್ವರ ಬೆಟ್ಟ ಜೂ 21: ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು.ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ ಎಂದು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.

ಇಂದು ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಸಭೆಯಲ್ಲಿ ಅವರು ಮಾತನಾಡಿದರು.

ಇವತ್ತು ಶಿಕ್ಷಣ ವ್ಯವಸ್ಥೆ ಹೇಗಾಗಿದೆ, ಎಷ್ಟು ದುಬಾರಿ ಆಗಿದೆ‌ ಎಂದರೆ, ಪೋಷಕರು ಸದಾ ಮಕ್ಕಳ ಶಿಕ್ಷಣದ ಬಗ್ಗೆಯೇ ಯೋಚಿಸುವಂತಾಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕಾಗಿ ಪೋಷಕರು ತಮ್ಮ ಅಗತ್ಯ ಮತ್ತು ಅನುಕೂಲಗಳ ಜೊತೆ ರಾಜಿ ಮಾಡಿಕೊಳ್ಳುತ್ತಾರೆ. ಪೋಷಕರ ಈ ತಪಸ್ಸಿಗೆ ಸಾರ್ಥಕತೆ ಬರುವುದು ಅವರ ಮಕ್ಕಳು ಸಾಧನೆ ಮಾಡಿದಾಗ, ಮಕ್ಕಳ ಪ್ರತಿಭಾ ಪುರಸ್ಕಾರವನ್ನು ಕಣ್ಣಲ್ಲಿ ಕಾಣುವ ಪೋಷಕರಿಗೆ ಇದಕ್ಕಿಂತ ದೊಡ್ಡ ಸಮಾಧಾನ ಬೇರೆ ಇರುವುದಿಲ್ಲ. ಜೊತೆಗೆ ಮಕ್ಕಳು ಪರಿಶ್ರಮದಿಂದ ಕಲಿತರೆ ಪೋಷಕರ ಮೇಲಿನ ಆರ್ಥಿಕ ಹೊರೆಯೂ ಕಡಿಮೆ ಆಗುತ್ತದೆ. ಆರ್ಥಿಕ ಹೊರೆ ಕಡಿಮೆ ಇದ್ದಾಗ ಸಹಜವಾಗಿ ಪೋಷಕರ ಆರೋಗ್ಯ ಮತ್ತು ಮನೆಯ ಆರೋಗ್ಯವೂ ಚನ್ನಾಗಿರುತ್ತದೆ. ಹೀಗಾಗಿ SSLC ಮತ್ತು PUC ದಾಟಿದ ನಿಮ್ಮಗಳ ಮೇಲೆ ಪೋಷಕರನ್ನು ಖುಷಿಯಾಗಿಡುವ ಜವಾಬ್ದಾರಿ ಇರುತ್ತದೆ. ನಿಮ್ಮ ಪರಿಶ್ರಮ ಮತ್ತು ಜ್ಞಾನದಾಹ ಹಾಗೂ ಕಲಿಕೆಯ ಹಸಿವು ಹೆಚ್ಚಾಗಬೇಕು. ಈ ದಾಹ ಮತ್ತು ಹಸಿವು ನಿಮಗೆ ಜ್ವರದಂತೆ ಕಾಡಬೇಕು ಎಂದರು.

ಇಲ್ಲಿ ಪ್ರತಿಭಾ ಸ್ವೀಕಾರಕ್ಕೆ ಬಂದಿರುವ ಮಕ್ಕಳ ಜೊತೆ ಎರಡು ವಿಚಾರಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ಒಂದು, ನಮ್ಮ ಎಲ್ಲಾ ಸಾಧನೆಗಳಿಗೂ ನಾವು ಬದುಕುತ್ತಿರುವ ಸಮಾಜದ ಕೊಡುಗೆ ಇರುತ್ತದೆ. ಸಮಾಜ ಎಂದರೆ ಶರೀರ ಇದ್ದ ಹಾಗೆ. ನಾವು ಈ ಶರೀರದೊಳಗೆ ಬದುಕುತ್ತಿದ್ದೇವೆ. ನಾವು ಇರುವ ಶರೀರವನ್ನು ಕಟ್ಟುಮಸ್ತಾಗಿ, ಆರೋಗ್ಯಕರವಾಗಿ, ಆನಂದಮಯವಾಗಿ ಇಟ್ಟುಕೊಳ್ಳುವುದೇ ನಮ್ಮ ಪ್ರತಿಭೆಗೆ, ನಮ್ಮ ಸಾಧನೆಗೆ ಸಿಗುವ ನಿಜವಾದ ಪುರಸ್ಕಾರ. ಎರಡನೇಯದಾಗಿ, ಇಂದು ಸಮಾಜದಲ್ಲಿ ಭ್ರಷ್ಟಾಚಾರ ಇರುವುದಕ್ಕೆ ಮುಖ್ಯ ಕಾರಣ ಆರೋಗ್ಯ ಮತ್ತು ಶಿಕ್ಷಣ ಅತ್ಯಂತ ದುಬಾರಿ ಆಗಿರುವುದೇ ಕಾರಣ ಆಗಿದೆ. ಮಕ್ಕಳ ಓದಿನ ಖರ್ಚು, ಹಿರಿಯರ ಆಸ್ಪತ್ರೆ ಖರ್ಚು ನಮ್ಮ ನಿದ್ದೆಗೆಡಿಸುತ್ತದೆ. ಸಮಾಜದಲ್ಲಿ ಇದು ಬದಲಾಗಬೇಕು. ಈ ಬದಲಾವಣೆಗೆ ಪೂರಕವಾಗಿ ನೀವುಗಳು ವಿದ್ಯಾರ್ಥಿ ಜೀವನದಿಂದಲೇ ಯೋಚಿಸಬೇಕು. ನಾವು ಬದುಕುತ್ತಿರುವ ಸಮಾಜವೆಂಬ ಈ ಶರೀರ ಇನ್ನಷ್ಟು ಆನಂದವಾಗಿರಲು, ಇನ್ನಷ್ಟು ಆರೋಗ್ಯಕರವಾಗಿರಲು ನಾವೇನು ಮಾಡಬೇಕು ಎನ್ನುವ ದಿಕ್ಕಿನಲ್ಲಿ ಸದಾ ಚಿಂತನಾಶೀಲರಾಗಿರಬೇಕು. ಈ ಚಿಂತನಶೀಲತೆ ನಮ್ಮ ಜ್ಞಾನ ದಾಹ ಮತ್ತು ವಿವೇಕದ ಹಸಿವನ್ನು ಹೆಚ್ಚಿಸುತ್ತದೆ ಎಂದರು.

ಈ ಎರಡು ಸಂಗತಿಗಳನ್ನು ಮಕ್ಕಳ ಜೊತೆ ಹಂಚಿಕೊಳ್ಳುವುಕ್ಕಾಗಿ ಮತ್ತು ಪೋಷಕರನ್ನು ವೃದ್ದಾಶ್ರಮಗಳಿಗೆ ಕಳುಹಿಸದಂತೆ ನಾವು ಜವಾಬ್ದಾರರಾಗಬೇಕು ಎನ್ನುವ ನನ್ನ ಕೋರಿಕೆಗಳನ್ನು ನಿಮ್ಮ ಮುಂದೆ ಇಡಲು ನಾನು ಇಲ್ಲಿಗೆ ಬಂದಿದ್ದೇನೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸತತ ಐದನೇ ವರ್ಷ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಇದಕ್ಕಾಗಿ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳನ್ನೂ ನಾನು ಅಭಿನಂದಿಸುತ್ತೇನೆ ಎಂದು ಹೇಳಿದರು.

ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.ಹಾಗೆಯೇ 5 ಲಕ್ಷ ರೂಪಾಯಿ ವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು. ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X