Chamarajanagar | ದೇಪಾಪುರದಲ್ಲಿ ಬೋನಿಗೆ ಬಿದ್ದ ಹುಲಿ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಾಮರಾಜನಗರ : ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಹುಲಿಯೊಂದು ಗುಂಡ್ಲುಪೇಟೆ ತಾಲ್ಲೂಕಿನ ದೇಪಾಪುರ ಗ್ರಾಮದಲ್ಲಿಟ್ಟ ಬೋನಿನಲ್ಲಿ ಸೆರೆಯಾಗಿದೆ.
ದೇಪಾಪುರ ಸೇರಿದಂತೆ ಹಲವಾರು ಗ್ರಾಮಗಳ ಜನರ ಒತ್ತಾಯದ ಮೇರೆಗೆ ಅರಣ್ಯಾಧಿಕಾರಿಗಳು ಹುಲಿ ಸೆರೆಗೆ ಬೋನಿರಿಸಿದ್ದರು.
ಇದೀಗ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನ್ ಗೆ ಬಿದ್ದ ಹುಲಿಯನ್ನು ನೋಡಲು ಗ್ರಾಮಸ್ಥರು ಕುತೂಹಲದಿಂದ ನೆರೆದಿದ್ದಾರೆ. ದೂರದಿಂದಲೇ ಹುಲಿಯನ್ನು ವೀಕ್ಷಿಸಿದ ಗ್ರಾಮಸ್ಥರು ತುಸು ನಿಟ್ಟುಸಿರು ಬಿಟ್ಟಿದ್ದಾರೆ.
ಬೋನ್ ನಲ್ಲಿ ಸೆರೆಯಾಗಿರುವ ಹುಲಿಯನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲು ಮುಂದಾಗಿದ್ದಾರೆ.
Next Story





