Hanur | ಮಲೆ ಮಹದೇಶ್ವರ ಬೆಟ್ಟದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ

ಚಾಮರಾಜನಗರ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿ. ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವವರಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ, ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಧಮೇಂದ್ರ ಮಾರ್ಗದರ್ಶನದಲ್ಲಿ ಮಲೆ ಮಹದೇಶ್ವರ ಬೆಟ್ಟ ಇನ್ಸ್‌ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಭಾಗ್ಯ ಸಂಗ್ರಹಿಸಿಟ್ಟಿದ್ದ 230 ಗ್ರಾಂ ಮಾಲನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ದಾಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಜಯರಾಮ, ಸಿಬ್ಬಂದಿಗಳಾದ ಸಿದ್ದರಾಮಯ್ಯ, ರಮೇಶ್, ಮಹೇಶ್, ಶಿವಮೂರ್ತಿ ಪಾಲ್ಗೊಂಡಿದ್ದರು.
Next Story





