ಚಾಮರಾಜನಗರ | ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ

ಚಾಮರಾಜನಗರ : ಹುಲಿ ದಾಳಿಗೆ ಕುರಿಗಾಹಿ ಮಹಿಳೆಯೊಬ್ಬಳು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಸೇರಿದ ದೇಶಿಪುರ ಕಾಲೋನಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೋನಿಯ ಹಾಡಿಯ ಪುಟ್ಟಮ್ಮ ಎಂಬ ಮಹಿಳೆ (36) ಹುಲಿ ದಾಳಿಗೆ ಬಲಿಯಾಗಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಕುರಿ ಮೇಯುಸುತ್ತಿದ್ದ ಮಹಿಳೆಯ ಮೇಲೆರಗಿದ ಹುಲಿ ಕುತ್ತಿಗೆ ಮತ್ತು ಎದೆಭಾಗಕ್ಕೆ ಬಲವಾಗಿ ದಾಳಿ ನಡೆಸಿ ಕೊಂದುಹಾಕಿದೆ. ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದು ಕೂಗಳತೆ ದೂರದಲ್ಲೇ ಬಿಟ್ಟು ಹೋಗಿದೆ. ಗ್ರಾಮಸ್ತರು ಪುಟ್ಟಮ್ಮನಿಗಾಗಿ ಹುಡುಕಾಟ ನಡೆಸಿದ ವೇಳೆ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಓಂಕಾರ್ ಅರಣ್ಯ ವಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story





