Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಯಳಂದೂರು | ಪರಿಶಿಷ್ಟರಿಗೆ ಬಾಡಿಗೆಗೆ ಮನೆ...

ಯಳಂದೂರು | ಪರಿಶಿಷ್ಟರಿಗೆ ಬಾಡಿಗೆಗೆ ಮನೆ : ಸವರ್ಣೀಯರ ಕುಟುಂಬಕ್ಕೆ ಬಹಿಷ್ಕಾರ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Jan 2025 12:07 AM IST
share
ಯಳಂದೂರು | ಪರಿಶಿಷ್ಟರಿಗೆ ಬಾಡಿಗೆಗೆ ಮನೆ : ಸವರ್ಣೀಯರ ಕುಟುಂಬಕ್ಕೆ ಬಹಿಷ್ಕಾರ ಆರೋಪ

ಯಳಂದೂರು : ತಾಲೂಕಿನ ಅಗರ ಗ್ರಾಮದ ಲಿಂಗಾಯತ ಬಡಾವಣೆಯ ಮಠದ ಬೀದಿಯಲ್ಲಿ ವಾಸವಾಗಿರುವ ವೀರಣ್ಣ, ಗೌರಮ್ಮ ಹಾಗೂ ಇವರ ಪುತ್ರ ವಿ.ಸುರೇಶ್ ಎಂಬುವರ ಕುಟುಂಬಕ್ಕೆ ಪರಿಶಿಷ್ಟ ಪಂಗಡದ ನಾಯಕ ಜನಾಂಗಕ್ಕೆ ಮನೆ ಬಾಡಿಗೆಗೆ ನೀಡಿದ್ದಾರೆ ಎಂಬ ಕಾರಣಕ್ಕೆ ಬಹಿಷ್ಕಾರ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿರುವುದು ವರದಿಯಾಗಿದೆ.

ಈ ಬಗ್ಗೆ ಬಹಿಷ್ಕಾರಕ್ಕೆ ಒಳಗಾದ ವಿ.ಸುರೇಶ್ ಮಾತನಾಡಿ, ನಮ್ಮ ಕುಟುಂಬದಲ್ಲಿ 80 ವರ್ಷ ಮೇಲ್ಪಟ್ಟ ವೀರಣ್ಣ ಇವರ ಪತ್ನಿ ಗೌರಮ್ಮ ಹಾಗೂ ನಾನು (ವಿ. ಸುರೇಶ) ವಾಸವಾಗಿದ್ದೇವೆ.ನಮ್ಮ ಸಹೋದರಿಗೆ ಮದುವೆ ಮಾಡಿಕೊಡಲಾಗಿದೆ. ನಾನು ಇನ್ನೂ ವಿವಾಹವಾಗಿಲ್ಲ. ತಮ್ಮ ಪೂರ್ವಜರ ಕಾಲದಿಂದಲೂ ನಾವು ಇಲ್ಲೇ ವಾಸವಾಗಿದ್ದೇವೆ. ಅಲ್ಲಿಂದ ನಮ್ಮ ಜಾತಿಯ ಸಭೆ, ಪೂಜೆ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ಎಲ್ಲರಂತೆ ನಮಗೂ ಆಹ್ವಾನ ನೀಡಲಾಗುತ್ತಿತ್ತು. ಆದರೆ ನಮ್ಮ ಮನೆಯನ್ನು ನಾಯಕ ಜನಾಂಗದ ಕುಟುಂಬಕ್ಕೆ ಬಾಡಿಗೆ ನೀಡಿರುವುದಕ್ಕೆ ನಮ್ಮ ಜಾತಿಯ ಮುಖಂಡರು, ಪರಿಶಿಷ್ಟ ಜನಾಂಗಕ್ಕೆ ನೀನು ಮನೆ ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿ ನಮ್ಮ ಕುಟುಂಬವನ್ನು ಧಾರ್ಮಿಕ ಕಾರ್ಯಕ್ರಮಗಳಿಂದ ದೂರ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಯಳಂದೂರು ತಾಲೂಕಿನ ಅಗರ ಗ್ರಾಮದ ನಿವಾಸಿ ಸುರೇಶ್ ಎಂಬವರು ಸಾಮಾಜಿಕ ಬಹಿಷ್ಕಾರದ ಕುರಿತು ದೂರು ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ನಾನು ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ವಹಿಸುತ್ತೇನೆ. ಈ ಬಗ್ಗೆ ದೂರುದಾರರು ಜಿಲ್ಲಾಧಿಕಾರಿಗೂ ದೂರು ನೀಡಲಿ.

-ಡಾ.ಬಿ.ಟಿ.ಕವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಚಾಮರಾಜನಗರ ಜಿಲ್ಲೆ

ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ , ಅಲ್ಲದೆ ಡಿವೈಎಸ್‌ಪಿಗೂ ದೂರು ನೀಡಿದ್ದೇನೆ. ಠಾಣೆಗೆ ಕೂಡ ನಾನು ಹೋಗಿದ್ದೇನೆ. ಅಲ್ಲಿ ನನ್ನ ಸಮಸ್ಯೆಗೆ ಪರಿಹಾರ ನೀಡುವ ಬದಲು ನನಗೆ ತಿಳುವಳಿಕೆಯನ್ನು ನೀಡಿ ಕಳುಹಿಸಲಾಗಿದೆ. ನಮ್ಮ ಜನಾಂಗದವರು ನಡೆಸುವ ಸಭೆಗಳಲ್ಲಿ ನಾನು ಹೋದಾಗ ನನಗೆ ನಿಂದಿಸಿ, ಸಭೆಯಿಂದ ಹೊರ ಕಳುಹಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರು ಸೂಕ್ತ ನ್ಯಾಯ ದೊರಕಿಸಿಕೊಡಬೇಕು.

-ಸುರೇಶ್, ಸಂತ್ರಸ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X