ಯಳಂದೂರು | ಟಾಟಾ ಏಸ್ ವಾಹನ ಪಲ್ಟಿ: 15ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರ: ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಯಳಂದೂರು ಪಟ್ಟಣದ ಅರಣ್ಯ ಇಲಾಖೆಯ ಸಮೀಪ ಇರುವ ರಾಷ್ಟ್ರೀಯ ಹೆದ್ದಾರಿ 948ರ ವೃತ್ತದಲ್ಲಿ ರವಿವಾರ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯಪುರ ಗ್ರಾಮದ ಸುಮಾರು 20ಕ್ಕೂ ಹೆಚ್ಚು ಮಂದಿ ಕೊಳ್ಳೇಗಾಲದ ಚಿಕ್ಕಲ್ಲೂರು ದೇವಸ್ಥಾನಕ್ಕೆ ಪೂಜೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹಠಾತ್ ಬೈಕ್ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ಕಳೆದುಕೊಂಡು ಏಸ್ ವಾಹನ ಪಲ್ಟಿಯಾಗಿದೆ.
ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯರು ಗಾಯಾಳುಗಳನ್ನು ಯಳಂದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
Next Story




