Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. ಜಂಗಮಕೋಟೆ ಭೂಸ್ವಾಧೀನ ವಿರುದ್ಧದ ಧರಣಿ...

ಜಂಗಮಕೋಟೆ ಭೂಸ್ವಾಧೀನ ವಿರುದ್ಧದ ಧರಣಿ 136ನೇ ದಿನಕ್ಕೆ

ವಾರ್ತಾಭಾರತಿವಾರ್ತಾಭಾರತಿ30 July 2026 1:01 AM IST
share
ಜಂಗಮಕೋಟೆ ಭೂಸ್ವಾಧೀನ ವಿರುದ್ಧದ ಧರಣಿ 136ನೇ ದಿನಕ್ಕೆ
ಆಗಸ್ಟ್‌ ಎರಡನೇ ವಾರದಲ್ಲಿ ಬೈಕ್‌ ರ್ಯಾಲಿ : ರವಿಕೃಷ್ಣಾ ರೆಡ್ಡಿ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಸುಮಾರು 2,390 ಎಕರೆ ಫಲವತ್ತಾದ ಕೃಷಿ ಭೂಮಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಸರಕಾರ ಮುಂದಾಗಿರುವುದನ್ನು ಹಾಗೂ ಭೂಸ್ವಾಧೀನಕ್ಕೆ ಕೆಐಎಡಿಬಿ ನೋಟಿಸ್ ನೀಡಿರುವುದನ್ನು ವಿರೋಧಿಸಿ ರೈತ ಸಂಘ,ಹಸಿರು ಸೇನೆ ಹಾಗೂ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಹೊರವಲಯದ ಜಿಲ್ಲಾಡಳಿತ ಭವನದ ಎದುರು ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರ 136ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಧರಣಿ ಸ್ಥಳಕ್ಕೆ ಭೇಟಿ ನೀಡಿ,ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ ಜಂಗಮಕೋಟೆಯಿಂದ ಬೃಹತ್ ಬೈಕ್ ರ್ಯಾಲಿ ನಡೆಸುವುದಾಗಿ ಘೋಷಿಸಿದರು.

ಈ ವೇಳೆ ಮಾತನಾಡಿದ ಅವರು, ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಬಾರದು ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಬಾರದು. ರೈತರು ತಮ್ಮ ಹಕ್ಕಿಗಾಗಿ ಸಂಘಟಿತವಾಗಿ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.

ಆನೇಕಲ್, ಬಿಡದಿ, ಜಂಗಮಕೋಟೆ ಹಾಗೂ ಇತರ ಭಾಗಗಳ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ ಅವರು, ಎಲ್ಲ ರೈತರೂ ಸಂಘಟಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಜಂಗಮಕೋಟೆ 13 ಹಳ್ಳಿಗಳ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಹೀರೆಬಲ್ಲ ಕೃಷ್ಣಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಗೋಪಾಲ್, ಮರಳುಕುಂಟೆ ರಾಮಾಂಜಿನಪ್ಪ, ತಾದೂರು ಮಂಜುನಾಥ್, ಅಶ್ವತ್ಥ ನಾರಾಯಣ ಗೌಡ, ಅಜಿತ್ ಕುಮಾರ್, ಡಿಎಸ್‌ಎಸ್ ಸಂಚಾಲಕ ಎನ್.ವೆಂಕಟೇಶ್, ಹೊಂಬೆ ಗೌಡ, ಕೃಷ್ಣ ಮೂರ್ತಿ, ರಾಘವೇಂದ್ರ, ಮೋಹನ್, ಗೌರಮ್ಮ, ಭಾಗ್ಯಮ್ಮ, ಪದ್ಮಮ್ಮ, ಕೆಆರ್‌ಎಸ್‌ನ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಆನಂದ್, ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ್, ಶಿವಾರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಇತರರು ಉಪಸ್ಥಿತರಿದ್ದರು.

ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು ಎಂಬ ಆಗ್ರಹದೊಂದಿಗೆ ಕಳೆದ 136 ದಿನಗಳಿಂದ ವಿವಿಧ ರೀತಿಯ ಹೋರಾಟಗಳನ್ನು ನಡೆಸಲಾಗುತ್ತಿದೆ.ನಮ್ಮ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಹಗಲು-ರಾತ್ರಿ ಎನ್ನದೆ ನಿರಂತರ ಧರಣಿ ನಡೆಸಲಾಗುತ್ತಿದೆ. ಆದರೂ ಸರಕಾರ ಮೌನ ವಹಿಸಿದೆ. ಹೋರಾಟಕ್ಕೆ ಅಡ್ಡಿಪಡಿಸುವ ಪ್ರಯತ್ನಗಳೂ ನಡೆದಿವೆ. ಆದರೆ ಯಾವುದೇ ಒತ್ತಡಕ್ಕೂ ಜಗ್ಗುವುದಿಲ್ಲ . ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದು.

-ಹೀರೆಬಲ್ಲ ಕೃಷ್ಣಪ್ಪ, ಅಧ್ಯಕ್ಷ, ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X