Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. Chikkaballapur | ಚಿಕ್ಕತೇಕಹಳ್ಳಿಯಲ್ಲಿ...

Chikkaballapur | ಚಿಕ್ಕತೇಕಹಳ್ಳಿಯಲ್ಲಿ ವಾಂತಿ-ಭೇದಿ ಪ್ರಕರಣ: ಅಕ್ರಮವಾಗಿ ಮಾರಾಟವಾಗಿದ್ದ ಕುಡಿಯುವ ನೀರಿನಲ್ಲಿ ಇ-ಕೋಲಿ ಬ್ಯಾಕ್ಟೀರಿಯಾ ಪತ್ತೆ

ವಾರ್ತಾಭಾರತಿವಾರ್ತಾಭಾರತಿ5 July 2026 11:54 PM IST
share
Chikkaballapur | ಚಿಕ್ಕತೇಕಹಳ್ಳಿಯಲ್ಲಿ ವಾಂತಿ-ಭೇದಿ ಪ್ರಕರಣ: ಅಕ್ರಮವಾಗಿ ಮಾರಾಟವಾಗಿದ್ದ ಕುಡಿಯುವ ನೀರಿನಲ್ಲಿ ಇ-ಕೋಲಿ ಬ್ಯಾಕ್ಟೀರಿಯಾ ಪತ್ತೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಜೂ.30ರಿಂದ ಕೆಲವರಿಗೆ ವಾಂತಿ-ಭೇದಿ (ಗ್ಯಾಸ್ಟ್ರೋಎಂಟರೈಟಿಸ್) ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡಿದೆ. ಜುಲೈ 2ರವರೆಗೆ ಒಟ್ಟು 17 ಮಂದಿ ಅಸ್ವಸ್ಥಗೊಂಡಿದ್ದು,ಎಲ್ಲರಿಗೂ ಚಿಕಿತ್ಸೆ ನೀಡಿ ಸಂಪೂರ್ಣ ಗುಣಮುಖಗೊಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಜಿಲ್ಲಾ ನೀರು ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಿ ತನಿಖೆ ನಡೆಸಲಾಗಿತ್ತು.

ಪರಿಶೀಲನೆ ವೇಳೆ ಗ್ರಾಮದ ನಿವಾಸಿ ಶ್ರೀನಿವಾಸ ಅವರು ಯಾವುದೇ ಅಧಿಕೃತ ಅನುಮತಿ ಪಡೆಯದೆ 20 ಲೀಟರ್ ಕ್ಯಾನ್‌ಗಳಲ್ಲಿ ಕುಡಿಯುವ ನೀರನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅವರು ಚಿಂತಾಮಣಿ ತಾಲೂಕಿನ ಚಂಗವಾರಹಳ್ಳಿ ಗ್ರಾಮದ ಖಾಸಗಿ ಶುದ್ಧೀಕರಣ ಘಟಕದಿಂದ ನೀರು ಖರೀದಿಸಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದರು.

ಆನಂತರ ಸಂಬಂಧಿತ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ಘಟಕದ ಪರವಾನಿಗೆ 31 ಮಾರ್ಚ್ 2022ರಂದು ಅವಧಿ ಮುಗಿದಿದ್ದರೂ ನವೀಕರಣ ಮಾಡಿಸದೆ ನೀರು ಸರಬರಾಜು ಮಾಡುತ್ತಿರುವುದು ಪತ್ತೆಯಾಗಿದೆ.ಕೂಡಲೇ ಘಟಕ ಹಾಗೂ ಗ್ರಾಮದಲ್ಲಿ ನೀರು ಸಂಗ್ರಹಿಸಿದ್ದ ಟ್ಯಾಂಕ್‌ಗಳನ್ನು ಸೀಜ್ ಮಾಡಲಾಗಿದ್ದು,ನೀರು ಸರಬರಾಜು ಸ್ಥಗಿತಗೊಳಿಸುವಂತೆ ನೋಟಿಸ್ ನೀಡಲಾಗಿದೆ.

ಜಿಲ್ಲಾ ನೀರು ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದ ವರದಿಯಲ್ಲಿ ಶ್ರೀನಿವಾಸ ಅವರು ಮಾರಾಟ ಮಾಡುತ್ತಿದ್ದ ನೀರಿನಲ್ಲಿ ಇ-ಕೋಲಿಬ್ಯಾಕ್ಟೀರಿಯಾ ಇರುವುದನ್ನು ದೃಢಪಡಿಸಲಾಗಿದೆ. ಇದರಿಂದಲೇ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದೆ.

ಇನ್ನೊಂದೆಡೆ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಜೆಜೆಎಂ ಯೋಜನೆಯಡಿ ಸರಬರಾಜಾಗುತ್ತಿರುವ ಸರಕಾರಿ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷಿಸಿದಾಗ ಯಾವುದೇ ರಾಸಾಯನಿಕ ಅಥವಾ ಜೈವಿಕ ಮಾಲಿನ್ಯ ಕಂಡುಬಂದಿಲ್ಲ ಎಂದು ಪ್ರಯೋಗಾಲಯ ವರದಿ ಸ್ಪಷ್ಟಪಡಿಸಿದೆ.

ಅನುಮತಿ ಪಡೆಯದೆ ನೀರು ಸರಬರಾಜು ಮಾಡಿದ ಶ್ರೀನಿವಾಸ ಹಾಗೂ ಅವಧಿ ಮೀರಿದ ಪರವಾನಗಿಯೊಂದಿಗೆ ಶುದ್ಧೀಕರಣ ಘಟಕ ನಡೆಸುತ್ತಿದ್ದ ಘಟಕದ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮತ್ತು ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲೆಯ ಮಟ್ಟದಲ್ಲಿ ಮಾರ್ಗಸೂಚಿ (ಸುತ್ತೋಲೆ) ಹೊರಡಿಸಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Tags

Chikkaballapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X