Chikkaballapur | ಮ್ಯಾರಥಾನ್ ವೇಳೆ ಕುಸಿದು ಕ್ರೀಡಾಪಟು ಮೃತ್ಯು

ಚಿಕ್ಕಬಳ್ಳಾಪುರ : ತಾಲೂಕಿನ ಐತಿಹಾಸಿಕ ಪ್ರಸಿದ್ಧ ನಂದಿಗಿರಿಧಾಮದಲ್ಲಿ ರವಿವಾರ ನಡೆದ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ವೇಳೆ ಕ್ರೀಡಾಪಟುವೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಮ್ಯಾರಥಾನ್‌ನಲ್ಲಿ 10 ಮತ್ತು 21 ಕಿಲೋಮೀಟರ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು. ಕಣಿವೆಪುರದ ಬಳಿಯ ಖಾಸಗಿ ಬಡಾವಣೆಯಿಂದ ನಂದಿ ಗಿರಿಧಾಮದವರೆಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. 21 ಕಿಲೋಮೀಟರ್ ವಿಭಾಗದಲ್ಲಿ ಭಾಗವಹಿಸಿದ್ದ ಬೆಂಗಳೂರಿನ ಅಮನ್ ದೀಪ್ ಸಿಂಗ್ ಜಗಡೆ (31) ಅವರು ಅರ್ಧದಷ್ಟು ದೂರ ಕ್ರಮಿಸಿದ ಬಳಿಕ ಅಸ್ವಸ್ಥರಾಗಿ ಕುಸಿದು ಬಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಮುದ್ದೇನಹಳ್ಳಿಯ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮ್ಯಾರಥಾನ್ ವೇಳೆ ಕ್ರೀಡಾಪಟುವಿನ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ
Next Story




