ದೇವನಹಳ್ಳಿ: ಭೂಗತ ವಿದ್ಯುತ್ ಕೇಬಲ್‌ಗಾಗಿ ಅಗೆದ ಚರಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ದೇವನಹಳ್ಳಿ ಸೆ.23: ಭೂಗತ ವಿದ್ಯುತ್ ಕೇಬಲ್ ಅಳವಡಿಸಲು ಅಗೆದಿದ್ದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.
ರಾಜೀವ್ ನಗರದ ನಿವಾಸಿ ನರಸಿಂಹಮೂರ್ತಿ(30) ಮೃತ ವ್ಯಕ್ತಿ.
ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರ ಸಮ್ಮುಖದಲ್ಲಿ ಮೃತದೇಹವನ್ನು ಹೊರತೆಗೆಯಲಾಗಿದೆ.
ಯುವಕ ನರಸಿಂಹಮೂರ್ತಿ ಯಾವ ಕಾರಣದಿಂದ ಮೃತಪಟ್ಟಿದ್ದಾರೆ ಎನ್ನುವುದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ.
Next Story




