Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕೆಪಿಸಿಸಿ ಅಧ್ಯಕ್ಷರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ9 July 2026 8:03 PM IST
share
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕೆಪಿಸಿಸಿ ಅಧ್ಯಕ್ಷರಿಗೆ ದೂರು

ಚಿಕ್ಕಮಗಳೂರು : ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೂಡಿಗೆರೆ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕರು ನಯನಾ ಮೋಟಮ್ಮ ವಿರುದ್ಧ ಕೆಪಿಸಿಸಿ ನಾಯಕರಿಗೆ ಲಿಖಿತ ದೂರು ಸಲ್ಲಿಸಿದ್ದು, ಈ ವಿಚಾರ ಸದ್ಯ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮತ್ತು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸೇರಿದಂತೆ 45ಕ್ಕೂ ಹೆಚ್ಚು ಹಿರಿಯ ಮುಖಂಡರನ್ನೊಳಗೊಂಡ ನಿಯೋಗವು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಲಿಖಿತ ದೂರನ್ನು ಸಲ್ಲಿಸಿದೆ. 2023ರ ಚುನಾವಣೆಯಲ್ಲಿ ಕೇವಲ 722 ಮತಗಳ ಅತ್ಯಲ್ಪ ಅಂತರದಿಂದ ಗೆಲುವು ಸಾಧಿಸಿರುವ ಶಾಸಕಿಯ ಧೋರಣೆಯಿಂದಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಭಾರೀ ಹಿನ್ನೆಡೆಯಾಗುವ ಆತಂಕವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ. ಹಾಲಿ ಶಾಸಕಿ ನಯನಾ ಮೋಟಮ್ಮ ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ಬೆವರು ಹರಿಸಿದ ಮೂಲ ಕಾಂಗ್ರೆಸ್ಸಿಗರನ್ನು ಸಂಪೂರ್ಣವಾಗಿ ಮೂಲೆಗುಂಪು ಮಾಡುತ್ತಿದ್ದಾರೆಂಬ ಆರೋಪ ಈ ಕಾಂಗ್ರೆಸ್ ಮುಖಂಡರದ್ದಾಗಿದೆ.

ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಒಟ್ಟು 16 ಗಂಭೀರ ಅಂಶಗಳನ್ನೊಳಗೊಂಡ ಸುದೀರ್ಘ ದೂರಿನ ಪಟ್ಟಿಯನ್ನು ಕೆಪಿಸಿಸಿಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿದ್ದು, 2023ರ ಚುನಾವಣೆಯ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಆರೆಸ್ಸೆಸ್‌ ಮತ್ತು ಭಜರಂಗದಳದ ಹಿನ್ನೆಲೆಯುಳ್ಳವರ ಜೊತೆ ಶಾಸಕಿ ಅತಿಯಾದ ಆಪ್ತತೆ ಹೊಂದಿದ್ದಾರೆ ಎಂದು ನಿಯೋಗವು ದೂರಿದೆ. ಅಷ್ಟೇ ಅಲ್ಲದೆ, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಅವರಿಗೆ 2025ರ ಮೂಡಿಗೆರೆ ಹಿಂದೂ ಮಹಾಗಣಪತಿ ಕಾರ್ಯಕ್ರಮದಲ್ಲಿ ಅದ್ದೂರಿ ಸ್ವಾಗತ ನೀಡಿ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಅಂಶವನ್ನು ಉಲ್ಲೇಖಿಸಲಾಗಿದೆ.

ಕ್ಷೇತ್ರದ ಸಾಂಸ್ಥಿಕ ರಾಜಕಾರಣದಲ್ಲೂ ಶಾಸಕಿಯ ಏಕಪಕ್ಷೀಯ ಧೋರಣೆ ಮಿತಿಮೀರಿದ್ದು, ಗೆದ್ದು ಮೂರು ವರ್ಷಗಳಾಗುತ್ತಾ ಬಂದರೂ ಅವರು ಇಂದಿರಾಗಾಂಧಿ ಸ್ಮಾರಕ ಭವನದ ಮಾತೃ ಬ್ಲಾಕ್ ಕಚೇರಿಗೆ ಒಮ್ಮೆಯೂ ಭೇಟಿ ನೀಡಿಲ್ಲ. ತಾಲೂಕು ಕೇಂದ್ರದಿಂದ ದೂರವಿರುವ ತಮ್ಮ ನಿವಾಸದಲ್ಲಿ ಗೃಹ ಕಚೇರಿ ತೆರೆದಿರುವುದರಿಂದ ಸಾರ್ವಜನಿಕರಿಗೆ ಹಾಗೂ ಕಾರ್ಯಕರ್ತರಿಗೆ ಭೇಟಿ ಮಾಡಲು ತೀವ್ರ ಅನಾನುಕೂಲವಾಗುತ್ತಿದೆ. ಪಕ್ಷದ ಅಧಿಕೃತ ಸಭೆಗಳು, ರಾಷ್ಟ್ರೀಯ ಹಬ್ಬಗಳು ಅಥವಾ ಸಂತಾಪ ಸೂಚಕ ಸಭೆಗಳಿಂದ ದೂರ ಉಳಿಯುವ ಅವರು, ಕೆಪಿಸಿಸಿ ಸೂಚಿಸಿದ ಸಮನ್ವಯ ಸಮಿತಿಯನ್ನೂ ರಚಿಸದೆ ಪಕ್ಷದ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಕೇವಲ ತಮ್ಮ ಹಿಂಬಾಲಕರ ಮೂಲಕವೇ ಹೋಬಳಿ ಅಧ್ಯಕ್ಷರ ನೇಮಕಾತಿ, ಅನುದಾನ ಹಂಚಿಕೆ, ವರ್ಗಾವಣೆ ಹಾಗೂ ಕಾಂಟ್ರಾಕ್ಟ್ ಲಾಬಿ ನಡೆಸುತ್ತಿದ್ದು, ಮುಂಚೂಣಿ ಘಟಕಗಳಿಗೆ ಯಾವುದೇ ಕಿಮ್ಮತ್ತು ನೀಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ವಾರದಲ್ಲಿ ಕೇವಲ ಎರಡು ದಿನ ಮಾತ್ರ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುವ ಶಾಸಕರನ್ನು ಭೇಟಿಯಾಗಲು ಕಾರ್ಯಕರ್ತರು ಬೆಂಗಳೂರಿಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ತಕ್ಷಣವೇ ಒಂದು ವಿಶೇಷ ತಂಡವನ್ನು ರಚಿಸಿ, ಮೂಡಿಗೆರೆ ಕ್ಷೇತ್ರದಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ತುರ್ತು ಕ್ರಮ ಕೈಗೊಳ್ಳದಿದ್ದರೆ ಮುಂದಿನ 2028ರ ವಿಧಾನಸಭಾ ಚುನಾವಣೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ತೀವ್ರ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಎಚ್ಚರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X