ಗೃಹ ಸಚಿವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ಆರೋಪ; ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನಿಗೆ ನ್ಯಾಯಾಂಗ ಬಂಧನ

ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು : ಗೃಹ ಸಚಿವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರಾಗೃಹಗಳಲ್ಲಿ ಖೈದಿಗಳಿಗೆ ನೀಡುತ್ತಿರುವ ರಾಜಾತಿಥ್ಯವನ್ನು ಖಂಡಿಸಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿರುದ್ಧ ಅವಹೇಳನಾಕಾರಿ ಮಾತುಗಳನ್ನು ಆಡಿದ್ದ ಆರೋಪದ ಮೇಲೆ ಸಂತೋಷ್ ಕೋಟ್ಯಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಕಾಂಗ್ರೆಸ್ ಕಾರ್ಯಕರ್ತರ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಪೊಲೀಸರು ಸಂತೋಷ್ ಕೊಟ್ಯಾನ್ ಅವರನ್ನು ಬಂಧಿಸಿ, ಹೌಸಿಂಗ್ ಬೋರ್ಡ್ ನ್ಯಾಯಧೀಶರ ನಿವಾಸಕ್ಕೆ ಹಾಜರುಪಡಿಸಿದರು. ನಂತರ ನ್ಯಾಯಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದರು.
Next Story





