ಬಾಳೆಹೊನ್ನೂರು: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ; ಸವಾರ ಮೃತ್ಯು

ಚಿಕ್ಕಮಗಳೂರು: ವಿಪರೀತ ಮಳೆಯ ಹಿನ್ನೆಲೆಯಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಬಾಳೆಹೊನ್ನೂರು ರಸ್ತೆ ಎಲೆಕಲ್ಲು ಸಮೀಪ ಸೋಮವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಕಡಬಗೆರೆ ನಿವಾಸಿ ಅನಿಲ್ ರುಜಾರಿಯೋ (50) ಎಂದು ಗುರುತಿಸಲಾಗಿದೆ.
ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಬಾಳೆಹೊನ್ನೂರು ಪಿಎಸ್ಐ ಹಾಗೂ ಸಿಬ್ಬಂದಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ತೀವ್ರ ಗಾಯಗೊಂಡಿದ್ದ ಅನಿಲ್ ಅವರನ್ನು ಅಗ್ನಿಶಾಮಕ ವಾಹನದಲ್ಲಿ ಕರೆದೊಯ್ದು ಬಾಳೆಹೊನ್ನೂರು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಗಾಯಗೊಂಡಿದ್ದ ಅನಿಲ್ ರುಜಾರಿಯೋ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ
ಮೇಗುರು ಗ್ರಾಮದ ಶ್ರೀ ವೆಂಕಟ ರಮಣ ದೇವಸ್ಥಾನದ ಕೆಳ ಭಾಗದಲ್ಲಿರುವ ಕೊಗ್ರೇ ಗೆ ಹೋಗುವ ರಸ್ತೆಯ ಮಾರ್ಗ ಮಧ್ಯೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
Next Story







