Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಸಂಸದೆ ಶೋಭಾ ಕರಂದ್ಲಾಜೆಗೆ ಲೋಕಸಭಾ...

ಸಂಸದೆ ಶೋಭಾ ಕರಂದ್ಲಾಜೆಗೆ ಲೋಕಸಭಾ ಟಿಕೆಟ್ ನೀಡದಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರಿಂದ ಧರಣಿ

ಪಕ್ಷದ ರಾಜ್ಯ ನಾಯಕರ ಸಮ್ಮುಖದಲ್ಲೇ ಕಾರ್ಯಕರ್ತರ ಅಸಮಾಧಾನ ಸ್ಪೋಟ ; ಸಿ.ಟಿ.ರವಿಗೆ ಟಿಕೆಟ್ ನೀಡುವಂತೆ ಪಟ್ಟು

ವಾರ್ತಾಭಾರತಿವಾರ್ತಾಭಾರತಿ10 March 2024 4:40 PM IST
share
ಸಂಸದೆ ಶೋಭಾ ಕರಂದ್ಲಾಜೆಗೆ ಲೋಕಸಭಾ ಟಿಕೆಟ್ ನೀಡದಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರಿಂದ ಧರಣಿ

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ನಡೆಯುತ್ತಿದ್ದ ʼಗೋ ಬ್ಯಾಕ್ʼ ಅಭಿಯಾನ ಸದ್ಯ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾಲಿ ಸಂಸದೆ ವಿರುದ್ಧ ಬಿಜೆಪಿ ಮುಖಂಡರು, ಕಾರ್ಯಕರ್ತರ ಅಸಮಾಧಾನ ರವಿವಾರ ಪಕ್ಷದ ಕಚೇರಿಯಲ್ಲೇ ಸ್ಪೋಟಗೊಂಡಿದ್ದು, ಪಕ್ಷದ ವರಿಷ್ಠರ ಸಮ್ಮುಖದಲ್ಲೇ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಧರಣಿ ನಡೆಸಿ, ಸಭೆಯಲ್ಲಿದ್ದ ಪಕ್ಷದ ಹಲವು ಮುಖಂಡರನ್ನು ಮುಜುಗರಕ್ಕೀಡು ಮಾಡಿದ ಘಟನೆ ನಡೆಯಿತು.

ಬಿಜೆಪಿ ಪಕ್ಷದ ಕಚೇರಿಯಲ್ಲಿ ರವಿವಾರ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಮಾಜಿ ಸಚಿವ ಆರಗ ಜ್ಞಾನೇಂದ್ರ, ಚುನಾವಣಾ ಉಸ್ತುವಾರಿ ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಸಿ.ಟಿ.ರವಿ, ಮತ್ತಿತರ ನಾಯಕರು ಭಾಗವಹಿಸಿದ್ದರು. ನೂರಾರು ಕಾರ್ಯಕರ್ತರು ಪಕ್ಷದ ವರಿಷ್ಠರು ಮಾತು ಆರಂಭಿಸುತ್ತಿದ್ದಂತೆ ʼಗೋ ಬ್ಯಾಕ್ʼ ಶೋಭಾ ಘೋಷಣೆ ಕೂಗಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು, ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಈ ಬಾರಿಯ ಲೋಕಸಭೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಸಿ.ಟಿ.ರವಿ ಸೇರಿದಂತೆ ಹಲವು ಮುಖಂಡರು, ಘೋಷಣೆ ಕೂಗುತ್ತಿದ್ದ ಕಾರ್ಯಕರ್ತರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಈ ವೇಳೆ ಸಭೆಯಲ್ಲಿ ಗೊಂದಲ ಏರ್ಪಟ್ಟಿದ್ದಲ್ಲದೇ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಬಿಜೆಪಿ ಪಕ್ಷದ ಕಚೇರಿ ಎದುರು ಆಗಮಿಸಿದ ಕಾರ್ಯಕರ್ತರು ಧರಣಿ ನಡೆಸಿ, ಶೋಭಾ ವಿರುದ್ಧ ಘೋಷಣೆ ಕೂಗಿ, ʼಗೋ ಬ್ಯಾಕ್ ಶೋಭಾʼ, ʼಗೋ ಬ್ಯಾಕ್ ಶೋಭಾʼ ಘೋಷಣೆ ಮೊಳಗಿಸಿದರು.

ಈ ವೇಳೆ ಮಾತನಾಡಿದ ಕಾರ್ಯಕರ್ತರು, "ಶೋಭಾ ಕರಂದ್ಲಾಜೆ ಅವರನ್ನು ಎರಡು ಬಾರಿ ಗೆಲ್ಲಿಸಿದ್ದೇವೆ. ಗೆದ್ದ ಬಳಿಕ ಕಾರ್ಯಕರ್ತರ ಕೈಗೆ ಸಿಗುವುದಿಲ್ಲ, ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಜಿಲ್ಲೆಯ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಶೋಭಾ ಕರಂದ್ಲಾಜೆ ಅವರೇ ಕಾರಣ. ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರಕ್ಕೂ ಅವರು ಬಂದಿಲ್ಲ. ಅವರಿಗೆ ಟಿಕೆಟ್ ನೀಡಿದಲ್ಲಿ ಸೋಲು ಖಚಿತ, ಅವರ ವಿರುದ್ಧ ಜಿಲ್ಲಾ ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಚುನಾವಣಾ ಪ್ರಚಾರದಲ್ಲೂ ಕಾರ್ಯಕರ್ತರು ಪಾಲ್ಗೊಳ್ಳುವುದಿಲ್ಲ. ಶೋಭಾ ಹೊರತು ಯಾರಿಗಾದರೂ ಟಿಕೆಟ್ ನೀಡಬೇಕು, ಪಕ್ಷದ ಸಂಘಟನೆಗೆ ಹಗಲಿರುಳು ಶ್ರಮಿಸುತ್ತಿರುವ ಸಿ.ಟಿ.ರವಿ ಅವರಿಗೇ ಟಿಕೆಟ್ ನೀಡಬೇಕು" ಎಂದು ಪಕ್ಷದ ವರಿಷ್ಠರಲ್ಲಿ ಕಾರ್ಯಕರ್ತರು ಒತ್ತಾಯಿಸಿದರು.

"ಯಡಿಯೂರಪ್ಪ ಅವರು ಹಾದಿ ಬೀದಿಯಲ್ಲಿ ಶೋಭಾ ಅವರಿಗೆ ಟಿಕೆಟ್ ಎಂದು ಘೋಷಣೆ ಮಾಡಿದ್ದಾರೆ. ಹೈಕಮಾಂಡ್ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡುವುದಕ್ಕೂ ಮುನ್ನ ಶೋಭಾ ಅವರೇ ಅಭ್ಯರ್ಥಿ ಎಂದು ಯಡಿಯೂರಪ್ಪ ಹೇಳಿಕೆ ನೀಡಿರುವುದು ಎಷ್ಟು ಸರಿ?" ಎಂದು ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದರು.

ಗೊಂದಲ ಶಮನ ಮಾಡುವ ನಿಟ್ಟಿನಲ್ಲಿ ಪಕ್ಷದ ರಾಜ್ಯ ಮಟ್ಟದ ನಾಯಕರು, ಶೋಭಾ ಕರಂದ್ಲಾಜೆ ವಿರುದ್ಧದ ಕಾರ್ಯಕರ್ತರ ಅಸಮಾಧಾನದ ವಿಚಾರವನ್ನು ರಾಷ್ಟ್ರಮಟ್ಟದ ನಾಯಕರಿಗೆ ಮನವರಿಕೆ ಮಾಡುವ ಭರವಸೆ ನೀಡಿದ್ದರಿಂದ ಪರಿಸ್ಥಿತಿ ತಿಳಿಯಾಯಿತು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಆರಂಭದಿಂದಲೂ ಕಾರ್ಯಕರ್ತರಲ್ಲಿ ಅಸಮಾಧಾನ ಹೊಗೆ ಎದ್ದಿತ್ತು. ಶೋಭಾ ವಿರುದ್ಧ ಕಾರ್ಯಕರ್ತರು ಪತ್ರ ಚಳವಳಿ ಆರಂಭಿಸಿದ್ದಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ʼಗೋ ಬ್ಯಾಕ್ ಶೋಭಾʼ ಅಭಿಯಾನ ಆರಂಭಿಸಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಅವರು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದ ವೇಳೆ, ಶೋಭಾ ಅವರೇ ಅಭ್ಯರ್ಥಿ ಎಂದು ಹೇಳಿಕೆ ನೀಡಿದ ಬಳಿಕ ಶೋಭಾ ವಿರುದ್ಧದ ʼಗೋ ಬ್ಯಾಕ್ʼ ಅಭಿಯಾನ ಮತ್ತಷ್ಟು ತೀವ್ರವಾಗಿತ್ತು. ಸದ್ಯ ಶೋಭಾ ಕರಂದ್ಲಾಜೆ ವಿರುದ್ಧ ʼಗೋ ಬ್ಯಾಕ್ʼ ಅಭಿಯಾನ ಆರಂಭಿಸಿರುವವರು ಸ್ವತಃ ಬಿಜೆಪಿ ಕಾರ್ಯಕರ್ತರೇ ಎಂಬುದು ರವಿವಾರ ಪಕ್ಷದ ಕಚೇರಿಯಲ್ಲಿ ಶೋಭಾ ವಿರುದ್ಧ ಕಾರ್ಯಕರ್ತರೇ ʼಗೋ ಬ್ಯಾಕ್ ಶೋಭಾʼ ಘೋಷಣೆ ಕೂಗಿ ಧರಣಿ ನಡೆಸಿರುವುದು ಸಾಕ್ಷಿಯಾಗಿದೆ.

ಪಕ್ಷದ ಕಚೇರಿಯಲ್ಲಿ ರವಿವಾರ ನಡೆದ ಧರಣಿಯಿಂದ ಬೇಸರವಾಗಿದೆ. ಕಾರ್ಯಕರ್ತರಿಗೆ ಅನಿಸಿಕೆ ಹೇಳಿಕೊಳ್ಳಲು ಮುಕ್ತ ಅವಕಾಶವನ್ನು ಪಕ್ಷ ನೀಡಿದೆ. ಆದರೆ ಅದನ್ನು ಬಹಿರಂಗವಾಗಿ ಧರಣಿ ನಡೆಸಿ ಹೇಳುವುದು ಸರಿಯಲ್ಲ. ನಮ್ಮ ಗುರಿ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬುದಾಗಿದೆ. ಮೋದಿ ಪ್ರಧಾನಿಯಾಗಬೇಕಿದ್ದರೇ ಎಲ್ಲೆಡೆ ಬಿಜೆಪಿ ಗೆಲ್ಲಬೇಕು. ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್‍ಗೆ ಬಿಟ್ಟಿದ್ದು, ಕಾರ್ಯಕರ್ತರ ಅನಿಸಿಕೆ, ಸರ್ವೆ ವರದಿ ಆಧರಿಸಿ ಅರ್ಹರಿಗೆ ಹೈಕಮಾಂಡ್ ಟಿಕೆಟ್ ನೀಡುತ್ತದೆ.

ಸಿ.ಟಿ.ರವಿ, ಮಾಜಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X