Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಬುದ್ಧ, ಬಸವ, ಅಂಬೇಡ್ಕರ್...

ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆಗಳನ್ನು ಪಾಲಿಸಿ: ನಿಜಗುಣಾನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ8 Jan 2024 10:57 PM IST
share
ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆಗಳನ್ನು ಪಾಲಿಸಿ: ನಿಜಗುಣಾನಂದ ಸ್ವಾಮೀಜಿ

ಚಿಕ್ಕಮಗಳೂರು: ಬುದ್ಧ, ಬಸವ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪಾಲಿಸಿದಲ್ಲಿ ಮಾತ್ರ ದೇಶದ ಭವಿಷ್ಯ ಉಜ್ವಲವಾಗುತ್ತದೆಯೇ ಹೊರತು ಮತ್ತೆ ಯಾವ ಜಾತಿ, ಧರ್ಮ, ದೇವರಿಂದಲೂ ಈ ದೇಶದ ಭವಿಷ್ಯ ಬದಲಾಗಲು ಸಾಧ್ಯವೇ ಇಲ್ಲ ಎಂದು ನಿಜಗುಣಾನಂದ ಸ್ವಾಮೀಜಿ ಹೇಳಿದ್ದಾರೆ.

ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ನಗರದ ಆಝಾದ್ ಪಾರ್ಕ್ ವೃತ್ತದಲ್ಲಿ ನಡೆದ 206ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮ ಮತ್ತು ದೇವರ ಬಗ್ಗೆ ಮಾತನಾಡುವವರು ಮನುಷ್ಯರೇ ಅಲ್ಲ. ತಟ್ಟೆ ಕಾಸಿಗಾಗಿ, ತಮ್ಮ ಸ್ವಾರ್ಥಕ್ಕಾಗಿ ಮಾತನಾಡುತ್ತಾರೆ. ದೇವರು, ಧರ್ಮದ ಬಗ್ಗೆ ಮಾತನಾಡಿದವರಿಂದ ಈ ದೇಶದ ಭವಿಷ್ಯ ಬದಲಾಗಲೇ ಇಲ್ಲ. ಮಾನವೀಯತೆ, ಪ್ರೀತಿ, ಕರುಣೆ, ಸಮಾನತೆ, ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ ಬುದ್ಧ, ಬಸವ, ಅಂಬೇಡ್ಕರ್ ಅವರಿಂದಾಗಿ ದೇಶದಲ್ಲಿ ಭವಿಷ್ಯ ಇಷ್ಟು ಪ್ರಗತಿ ಕಂಡಿದೆ ಎಂದು ನುಡಿದರು.

ಪ್ರಸಕ್ತ ಭಾರತ ಅಂಬೇಡ್ಕರ್ ಅವರ ಸಂವಿಧಾನದ ಕಾನೂನುಗಳ ಅಡಿಯಲ್ಲಿ ನಡೆಯುತ್ತಿದೆ. ಆದರೂ ದೇಶದಲ್ಲಿ ಜಾತೀಯತೆ, ಅಸಮಾನತೆ, ದೌರ್ಜನ್ಯ, ಶೋಷಣೆ ಇಂದಿಗೂ ಜೀವಂತವಾಗಿದೆ. ಇದಕ್ಕೆ ನಾವು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳದಿರುವುದು, ಅವರ ಹೋರಾಟದ ಹಾದಿಯಲ್ಲಿ ನಡೆಯದಿರುವುದು, ಶಿಕ್ಷಣ, ಸಂಘಟನೆ, ಹೋರಾಟ ಎಂಬ ತತ್ವವನ್ನು ಪಾಲಿಸದಿರುವುದೇ ಕಾರಣ ಎಂದು ಅಭಿಪ್ರಾಯಿಸಿದರು.

ಅಂಬೇಡ್ಕರ್ ಅವರ ಮೇಲಿನ ಅಭಿಮಾನ ಮಾತ್ರ ಎಲ್ಲರಲ್ಲೂ ಕಾಣುತ್ತಿದ್ದೇವೆ. ಆದರೆ, ಈ ಅಭಿಮಾನವನ್ನು ಬಿಟ್ಟು ಅವರ ಮೇಲೆ ಅನುಭಾವ ಮತ್ತು ಅಂಬೇಡ್ಕರ್ ಅವರ ಜ್ಞಾನ ಎಲ್ಲರಲ್ಲೂ ಬೆಳೆಯಬೇಕು. ನಮ್ಮ ಜಾತಿಯವರು ಎಂಬ ಕಾರಣಕ್ಕೆ ಅಂಬೇಡ್ಕರ್ ಮೇಲಿನ ಅಭಿಮಾನದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ದೇಶದ ಭವಿಷ್ಯವನ್ನೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಅನುಭಾವ ಮತ್ತು ಸ್ವಾಭಿಮಾನದಿಂದ ಮಾತ್ರ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ. ಅಂಬೇಡ್ಕರ್ ಅವರ ಜೀವನ, ಹೋರಾಟ, ಅನುಭವಿಸಿದ ನೋವು, ಅವಮಾನ ಹಾಗೂ ಅವರ ಸಾಧನೆ, ಜ್ಞಾನದ ಬಗ್ಗೆ ಎಲ್ಲರಲ್ಲೂ ಅರಿವು ಇರಬೇಕು. ಇದನ್ನು ಯುವ ಪೀಳಿಗೆಗೆ ತಿಳಿ ಹೇಳಬೇಕೆಂದು ನಿಜಗುಣಾನಂದ ಸ್ವಾಮೀಜಿ ಸಲಹೆ ನೀಡಿದರು.

ಶಾಸಕ ಎಚ್.ಡಿ.ತಮಯ್ಯ ಮಾತನಾಡಿ, ಪೇಶ್ವೇಗಳ ವಿರುದ್ಧ ಮಹರ್ ಸಮುದಾಯದ ಮುಖಂಡ ಸಿದ್ದನಾಕ ನೇತೃತ್ವದಲ್ಲಿ 1818ರಲ್ಲಿ ನಡೆದ ಕೋರೆಗಾಂವ್ ಕದನ ಸ್ವಾಭಿಮಾ, ಅಸ್ಮಿತೆಯ ಪ್ರತೀಕವಾಗಿದ್ದು, ಆ ಯುದ್ದದಲ್ಲಿ ತ್ಯಾಗ ಬಲಿದಾನ ಗೊಂಡವರನ್ನು ನೆನಯಬೇಕಾದದ್ದು, ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. 20ಸಾವಿರ ಮರಾಠ ಸೈನಿಕರನ್ನು ಕೇವಲ 500 ಸೈನಿಕರು ಹೋರಾಟ ನಡೆಸಿ ಶೋಷಿತರ ಪರವಾಗಿ ಅಸಮಾನತೆಯ ವಿರುದ್ದ ಜಯಗಳಿಸಿದ್ದು, ಇತಿಹಾಸದ ಪುಟಗಳಲ್ಲಿ ದಾಖಲೆಯಾಗಿದೆ ಎಂದ ಅವರು, ಕೋರೆಗಾಂವ್ ವಿಜಯೋತ್ಸವವನ್ನು ನೂರಾರು ವರ್ಷಗಳ ನಂತರ ಡಾ|ಬಿ.ಆರ್.ಅಂಬೇಡ್ಕರ್ ಅವರು ದುಂಡು ಮೇಜಿನ ಪರಿಷತ್‌ನಲ್ಲಿ ಪ್ರಸ್ತಾಪಿಸುವ ಮೂಲಕ ಮಹರ್ ಸೈನಿಕರ ಶೈರ್ಯದ ಇತಿಹಾಸವನ್ನು ಜೀವಂತ ವಾಗಿಸಿದ್ದಾರೆ ಎಂದು ಹೇಳಿದರು.

ಚಿಂತಕ ಗೊಲ್ಲಳ್ಳಿ ಶಿವಪ್ರಸಾದ್ ಮಾತನಾಡಿ, ಅಂದು ನಡೆದ ಕೋರೆಗಾಂವ್ ಯುದ್ಧ ಸ್ವಾಭಿಮಾನ, ಸಮಾನತೆ, ಆತ್ಮಗೌರವಕ್ಕಾಗಿ. ಅಂಬೇಡ್ಕರ್ ಚಿಂತನೆಗಳಿಲ್ಲದ ಭಾರತ ಅನಾಥವಾಗುತ್ತಿತ್ತು. ಬಾಬಾ ಸಾಹೇಬರನ್ನು ಕಾಮಾಲೆ ಕಣ್ಣಿನಿಂದ ನೋಡುವ ಪ್ರವೃತ್ತಿ ತೊಲಗಬೇಕು. ದೇಶದಲ್ಲಿ ಕೌರ್ಯ, ಅಸಹನೆ, ದ್ವೇಷವನ್ನು ಬಿತ್ತಲಾಗುತ್ತಿದೆ. ಸತ್ಯ, ಕಾರುಣ್ಯ, ಸಹನೆ ಶಾಂತಿಯ ಸಂದೇಶವನ್ನು ಸಾರಿದ ಸೂಫಿ ಸಂತರು ಶರಣರ ಮಾರ್ಗದರ್ಶನ ಪ್ರಸಕ್ತ ಸಮಾಜಕ್ಕೆ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಫಾದರ್ ಮಾರ್ಷಲ್ ಪಿಂಟೋ, ಮಾಜಿ ಸಚಿವರಾದ ಬಿ.ಬಿ.ನಿಂಗಯ್ಯ, ಡಾ.ಮೋಟಮ್ಮ, ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಭೀಮ್ ಆರ್ಮಿಯ ಜಿಲ್ಲಾಧ್ಯಕ್ಷ ಹೊನ್ನೇಶ್, ಡಿಎಸ್‌ಎಸ್ ಮುಖಂಡರಾದ ಮರ್ಲೆ ಅಣ್ಣಯ್ಯ, ಕೃಷ್ಣಮೂರ್ತಿ, ವಸಂತಕುಮಾರ್, ಅಂಗಡಿ ಚಂದ್ರು, ರಮೇಶ್, ಹುಣಸೆಮಕ್ಕಿ ಲಕ್ಷ್ಮಣ, ಕೂದುವಳ್ಳಿ ಮಂಜು ನಾಥ್, ಕೆ.ಭರತ್, ರಮೇಶ್, ಚಂದ್ರಶೇಖರ್, ರಘು, ಗೌಸ್ ಮುನೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X