ಚಾರ್ಮಾಡಿ ಘಾಟ್ನ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ.
ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಗಾಳಿಯ ವೇಗಕ್ಕೆ ಇನ್ನಷ್ಟು ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಆತಂಕ ಎದುರಾಗಿದೆ.
ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
Next Story





