Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ...

ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ಬೆಂಕಿ ಅವಘಡ; ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹರಸಾಹಸ

ತನು ಕೊಟ್ಟಿಗೆಹಾರತನು ಕೊಟ್ಟಿಗೆಹಾರ25 Jan 2025 5:43 PM IST
share
ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ಬೆಂಕಿ ಅವಘಡ; ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹರಸಾಹಸ

ಮೂಡಿಗೆರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅರಣ್ಯದ ಕಲ್ಲು ಪ್ರದೇಶದಲ್ಲಿ ಒಣಗಿರುವ ಹುಲ್ಲು, ಗಿಡಗಂಟಿಗಳಿಗೆ ದುಷ್ಕರ್ಮಿಗಳು ಹಚ್ಚಿರುವ ಬೆಂಕಿ ಪರಿಸರವನ್ನು ವ್ಯಾಪಿಸಿರುವ ಶಂಕೆ ವ್ಯಕ್ತವಾಗಿದೆ.

ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಬೆಂಕಿ ನಿಯಂತ್ರಿಸಲು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಶುಕ್ರವಾರ ರಾತ್ರಿಯಿಂದ ಬೆಂಕಿ ಹೊತ್ತಿಕೊಂಡಿದೆ. ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟ್‌ನ ಬಿದಿರುತಳ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. ಇದೀಗ ಶುಕ್ರವಾರ ರಾತ್ರಿ ಮತ್ತೆ ಬೆಂಕಿ ಹೊತ್ತಿಕೊಂಡಿದೆ.

ಈ ಕಾಡ್ಗಿಚ್ಚಿನಿಂದ ಪ್ರಾಣಿ ಸಂಕುಲ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಅಪಾಯ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಮಾರ್ಚ್-ಎಪ್ರಿಲ್‌ನ ಬೇಸಿಗೆಯಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಆಗಲಿದೆ. ಆದರೆ ಈ ಬಾರಿ ಕಿಡಿಗೇಡಿಗಳೇ ಬೆಂಕಿ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಂತವರ ಬಗ್ಗೆ ಸುಳಿವು ಸಿಕ್ಕರೆ ಸೂಕ್ತ ಕ್ರಮ ಕೈಗೊ‍‍ಳ್ಳಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

"ಚಾರ್ಮಾಡಿ ಘಾಟ್‌ನಲ್ಲಿ ದುಷ್ಕರ್ಮಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದು, ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಚಾರ್ಮಾಡಿ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿಲ್ಲ. ಇದು ಕಿಡಿಗೇಡಿಗಳ ಕೃತ್ಯವಾಗಿದ್ದು ಅವರನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಚಾರ್ಮಾಡಿ ಅರಣ್ಯದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಅರಣ್ಯದ ಸುಮಾರು ಗಿಡಮರಗಳು ಸುಟ್ಟು ಹೋಗಿವೆ. ನಮ್ಮ ತಂಡ ಅಲ್ಲಿಯೇ ಬೀಡು ಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ"

ರಮೇಶ್ ಬಾಬು, ಡಿಎಫ್‌ಒ ಚಿಕ್ಕಮಗಳೂರು

"ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಬಿದಿರುತಳ ಮತ್ತು ಸುತ್ತ ಮುತ್ತಲಿನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಬೆಂಕಿಯಿಂದ ಎಷ್ಟು ಅರಣ್ಯಕ್ಕೆ ಹಾನಿಯಾಗಿದೆ. ಎಷ್ಟು ಹಾನಿ ತಡೆಯಲಾಗಿದೆ ಎಂದು ಕೂಡಲೇ ವರದಿ ಒದಗಿಸಬೇಕು. ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚೆರಿಕೆ ಕ್ರಮ ವಹಿಸಲು ಹಾಗೂ ಅಗ್ನಿಶಾಮಕ ಸಾಧನಗಳನ್ನು ಮತ್ತು ಸಿಬ್ಬಂದಿಯನ್ನು ಸನ್ನದ್ದ ಸ್ಥಿತಿಯಲ್ಲಿರುವಂತೆ ಸೂಚಿಸಲಾಗಿದೆ"

-ಈಶ್ವರ್‌ ಖಂಡ್ರೆ, ಅರಣ್ಯ ಸಚಿವರು

Tags

Charmadi Ghat
share
ತನು ಕೊಟ್ಟಿಗೆಹಾರ
ತನು ಕೊಟ್ಟಿಗೆಹಾರ
Next Story
X