Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರಿನಲ್ಲಿ ಮುಂದುವರಿದ ಉತ್ತಮ...

ಚಿಕ್ಕಮಗಳೂರಿನಲ್ಲಿ ಮುಂದುವರಿದ ಉತ್ತಮ ಮಳೆ ; ಕೃಷಿ ಚಟುವಟಿಕೆ ಬಿರುಸು

ಪ್ರಮುಖ ನದಿಗಳಲ್ಲಿ ನೀರಿನ ಹರಿವು ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ3 Jun 2024 7:09 PM IST
share
  • ಚಿಕ್ಕಮಗಳೂರಿನಲ್ಲಿ ಮುಂದುವರಿದ ಉತ್ತಮ ಮಳೆ ; ಕೃಷಿ ಚಟುವಟಿಕೆ ಬಿರುಸು
  • ಚಿಕ್ಕಮಗಳೂರಿನಲ್ಲಿ ಮುಂದುವರಿದ ಉತ್ತಮ ಮಳೆ ; ಕೃಷಿ ಚಟುವಟಿಕೆ ಬಿರುಸು

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಳೆ ಮುಂದುವರಿದಿದೆ. ರವಿವಾರ ನಗರ ಸೇರಿದಂತೆ ಮಲೆನಾಡು ಹಾಗೂ ಬಯಲು ಭಾಗದ ಅಲ್ಲಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗಿದ್ದು, ಸೋಮವಾರ ಮಧ್ಯಾಹ್ನ ಹಾಗೂ ಸಂಜೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಹಾಗೂ ಬಯಲು ಭಾಗದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದೆ.

ಸೋಮವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಕೆಲ ಹೊತ್ತು ಧಾರಾಕಾರ ಮಳೆಯಾಗಿದ್ದು, ಮಳೆಯಿಂದಾಗಿ ಕೆಲ ಹೊತ್ತು ನಗರದಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದಲ್ಲದೇ ಜನಜೀವನವೂ ಅಸ್ತವ್ಯಸ್ತಗೊಂಡಿತ್ತು. ನಂತರ ಬಿಡುವು ನೀಡಿದ್ದ ಮಳೆ ಸಂಜೆ ವೇಳೆ ಮತ್ತೆ ಗುಡುಗ ಸಹಿತ ಆರ್ಭಟಿಸಿತು. ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಬಯಲು ಭಾಗದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳ ವ್ಯಾಪ್ತಿಯಲ್ಲೂ ಸೋಮವಾರ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ.

ಇನ್ನು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದಾಗಿ ಮಲೆನಾಡಿನ ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯದಿದ್ದರೂ ಈ ಬಾರಿಯ ಬೇಸಿಗೆಯ ಭಾರೀ ತಾಪಮಾನದಿಂದ ಬದಿದಾಗಿದ್ದ ನದಿಗಳು, ಕೆರೆ, ಹಳ್ಳಕೊಳ್ಳಗಳ ಒಡಲು ಮಳೆ ನೀರಿನಿಂದಾಗಿ ನಳನಳಿಸಲಾರಂಭಿಸಿವೆ.

ಜಿಲ್ಲೆಯಾದ್ಯಂತ ಈ ಬಾರಿ ಮುಂಗಾರಿಗೂ ಮುನ್ನ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದಲ್ಲಿ ಕಾಫಿ, ಅಡಿಕೆ ತೋಟಗಳಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಕಾಫಿ, ಅಡಿಕೆ ತೋಟಗಳಿಗೆ ನೀರು ಹಾಯಿಸಲು ಪರದಾಡುತ್ತಿದ್ದ ಬೆಳೆಗಾರಿಗೆ ಮಳೆ ಸಂತಸ ನೀಡಿದೆ.

ಕಾಫಿ ತೋಟಗಳಲ್ಲಿ ಚಿಗುರು ತೆಗೆಯುವ, ಗೊಬ್ಬರ ಹಾಕುವ ಕೃಷಿ ಚಟುವಟಿಕೆ ನಡೆಯುತ್ತಿದ್ದರೇ, ಅಡಿಕೆ ತೋಟಗಳಲ್ಲಿ ಅಡಿಕೆ ಬೆಳೆಗೆ ತಗುಲುವ ಕೊಳೆ ರೋಗಕ್ಕೆ ದ್ರಾವಣ ಸಿಂಪಡಿಸುವ, ಅಡಿಕೆ ಮರಗಳ ಬೇಸಾಯದ ಕೆಲಸ ಚರುಕುಗೊಂಡಿದೆ. ಇನ್ನು ಭತ್ತದ ಗದ್ದೆಗಳನ್ನು ನಾಟಿಗೆ ಹದಗೊಳಿಸುವ ಕೆಲಸವೂ ಮಲೆನಾಡಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಬಯಲು ಭಾಗದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ತರಕಾರಿ ಬೆಳೆಗಳನ್ನು ಬೆಳೆಯಲು ಸಾಧ್ಯವಾಗದ ರೈತರು ಸದ್ಯ ಉತ್ತಮ ಮಳೆ ಕಾರಣದಿಂದ ಹೊಲ, ಜಮೀನುಗಳನ್ನು ಹದಗೊಳಿಸಿ ತರಿಕಾರಿ, ರಾಗಿ, ಜೋಳ ಸೇರಿದಂತೆ ದ್ವಿದಳ ಧಾನ್ಯಗಳ ಬಿತ್ತನೆಗೆ ಮುಂದಾಗಿದ್ದು, ರಸಗೊಬ್ಬರ, ಬಿತ್ತನೆ ಬೀಜಗಳ ಖರೀದಿಯೂ ಭರದಿಂದ ಸಾಗಿದೆ.

Tags

ChikkamagalurAgricultural activity
share
ವಾರ್ತಾಭಾರತಿ
ವಾರ್ತಾಭಾರತಿ
Next Story
X