Chikkamagaluru | ಬಾವಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಉಸಿರುಗಟ್ಟಿ ವ್ಯಕ್ತಿ ಮೃತ್ಯು

ಚಿಕ್ಕಮಗಳೂರು : ಬಾವಿ ಸ್ವಚ್ಛ ಮಾಡಲು ಇಳಿದಿದ್ದ ವ್ಯಕ್ತಿಯೊಬ್ಬರು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿರುವ ಘಟನೆ ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ಸೋಮವಾರ ನಡೆದಿದೆ.
ದರ್ಶನ್ ಎಂಬುವರ ಮನೆಯ ಬಾವಿಯನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಮೋಹನ್ (40) ಎಂಬುವರು ಬಾವಿಯೊಳಗೆ ಇಳಿದಿದ್ದರು. ಆದರೆ ಬಾವಿಯ ಆಳದಲ್ಲಿ ತೀವ್ರವಾದ ಉಸಿರಾಟದ ಸಮಸ್ಯೆ ಎದುರಾದ ಕಾರಣ ಅವರು ಬಾವಿಯೊಳಗೇ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಆಕಸ್ಮಿಕ ದುರಂತದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




