Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಟಿಪ್ಪು ಕಟೌಟ್‍ಗೆ ಪಾಕಿಸ್ತಾನ ಬೆಂಬಲಿಸಿ...

ಟಿಪ್ಪು ಕಟೌಟ್‍ಗೆ ಪಾಕಿಸ್ತಾನ ಬೆಂಬಲಿಸಿ ಹಾಡು ಜೋಡಣೆ ಪ್ರಕರಣ; ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ31 Aug 2026 10:55 PM IST
share
ಟಿಪ್ಪು ಕಟೌಟ್‍ಗೆ ಪಾಕಿಸ್ತಾನ ಬೆಂಬಲಿಸಿ ಹಾಡು ಜೋಡಣೆ ಪ್ರಕರಣ; ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ

ಚಿಕ್ಕಮಗಳೂರು : ಮೀಲಾದುನ್ನಬಿ ವೇಳೆ ಟಿಪ್ಪು ಸುಲ್ತಾನ್ ಬೃಹತ್ ಕಟೌಟ್ ವಿಡಿಯೋಗೆ ಪಾಕಿಸ್ತಾನ ಬೆಂಬಲಿತ ಹಾಡು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೋಮವಾರ ರಾಷ್ಟ್ರ ಸುರಕ್ಷಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಸವನಹಳ್ಳಿ ಮುಖ್ಯರಸ್ತೆಯಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಕಾರರು ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಆಜಾದ್‍ಪಾರ್ಕ್ ವೃತ್ತ ತಲುಪಿದರು.

ನಗರದ ಓಂಕಾರೇಶ್ವರ ದೇವಸ್ಥಾನ ಬಳಿ ನಡೆದ ಬಹಿರಂಗ ಸಭೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ದೇಶದ ಜನರಲ್ಲಿ ರಾಷ್ಟ್ರದ ಸುರಕ್ಷತೆ ಮತ್ತು ರಾಷ್ಟ್ರೀಯ ಏಕತೆ ಭಾವನೆ ಬಲಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಹೇಳಿದರು.

ದಕ್ಷಿಣ ಭಾರತದಿಂದ ಹೊರಹೊಮ್ಮುವ ರಾಷ್ಟ್ರೀಯ ಏಕತೆ ಸಂದೇಶ ಇಡೀ ದೇಶವನ್ನು ತಲುಪಬೇಕು. ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸಮಾನ ಅವಕಾಶ ಕಲ್ಪಿಸುವ ಪ್ರಯತ್ನ ನಡೆಯಬೇಕು. ಮುಸ್ಲಿಂ ಸಮುದಾಯವನ್ನು ಮತಬ್ಯಾಂಕ್‍ಗಾಗಿ ನೋಡಬಾರದು, ಯಾವುದೇ ಸಮುದಾಯದ ಸಾಮಾಜಿಕ ಸಮಸ್ಯೆಗಳನ್ನು ರಾಜಕೀಯ ಕಾರಣಗಳಿಂದ ಕಡೆಗಣಿಸಬಾರದು. ಕಾನೂನುಬದ್ಧ ಮತ್ತು ಪ್ರಜಾಸತಾತ್ಮಕವಾಗಿ ಪರಿಹಾರ ಕಂಡುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರ ಸುರಕ್ಷಾ ಸಮಿತಿ ಮುಖಂಡರಾದ ಆರ್.ಡಿ.ಮಹೇಂದ್ರ, ಸಂತೋಷ್ ಕೋಟ್ಯಾನ್, ಶ್ಯಾಮ್, ಸಚಿನ್, ರಂಜಿತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಎಂ.ಆರ್.ದೇವರಾಜ್ ಶೆಟ್ಟಿ, ಪುಷ್ಪರಾಜ್ ಜಯರಾಮ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X