Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. Chikkamagaluru | ಟಿಪ್ಪು ಕಟೌಟ್‌ನ...

Chikkamagaluru | ಟಿಪ್ಪು ಕಟೌಟ್‌ನ ವೀಡಿಯೊಗೆ ಆಕ್ಷೇಪಾರ್ಹ ಹಾಡು ಬಳಕೆ: ಆರೋಪ

ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ24 Aug 2026 7:54 PM IST
share
Chikkamagaluru | ಟಿಪ್ಪು ಕಟೌಟ್‌ನ ವೀಡಿಯೊಗೆ ಆಕ್ಷೇಪಾರ್ಹ ಹಾಡು ಬಳಕೆ: ಆರೋಪ

ಚಿಕ್ಕಮಗಳೂರು: ಮೀಲಾದುನ್ನಬಿ ಪ್ರಯುಕ್ತ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಸಂಬಂಧಿಸಿದ ವೀಡಿಯೊವೊಂದಕ್ಕೆ ಆಕ್ಷೇಪಾರ್ಹ ಹಾಡನ್ನು ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ಸೋಮವಾರ ರಾತ್ರಿ ಟಿಪ್ಪು ನಗರದಲ್ಲಿ ವರದಿಯಾಗಿದೆ. ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ (ಸುವೋಮೋಟೋ) ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಟಿಪ್ಪುನಗರದಲ್ಲಿ ಅಳವಡಿಸಿರುವ 40 ಅಡಿ ಎತ್ತರದ ಕಟೌಟ್‌ನ ವೀಡಿಯೊಗೆ ಪಾಕಿಸ್ತಾನಿ ಸೇನೆಯನ್ನು ಹೊಗಳುವ ಹಾಡನ್ನು ಜೋಡಿಸಿ, ‘ಚಿಕ್ಕಮಗಳೂರು ಪರ್ವ ಟಿಪ್ಪು ಬಾಯ್ಸ್’ ಎಂಬ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ರೀಲ್ಸ್ ಅಪ್ಲೋಡ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ವೀಡಿಯೊ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್ಸೈ ಧನರಾಜ್ ಅವರೇ ಸ್ವತಃ ನಗರ ಠಾಣೆಗೆ ದೂರು ನೀಡಿದ್ದಾರೆ.

ಸಮಾಜದಲ್ಲಿ ಕೋಮು ಸೌಹಾರ್ದ ಕೆಡಿಸುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗೂ ದ್ವೇಷ ಹುಟ್ಟು ಹಾಕುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಎಸ್ಪಿ ಹೇಳಿದ್ದೇನು?

ಮೀಲಾದುನ್ನಬಿ ಸಂಬಂಧ ಡಿಪಿಒ ಹಾಗೂ ಎಸ್‌ಡಿಪಿಒ ಮಟ್ಟದ ಶಾಂತಿ ಸಭೆಯಲ್ಲಿ ಸಮುದಾಯದ ಮುಖಂಡರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಳೆದ 5-6 ವರ್ಷಗಳ ನಿಯಮ, ಪದ್ಧತಿಗಳನ್ನೇ ಪಾಲಿಸಲು ಸೂಚಿಸಲಾಗಿದೆ. ಹೊಸ ಪದ್ಧತಿ ಅಥವಾ ಹೊಸ ಮಾರ್ಗಕ್ಕೆ ಯಾವುದೇ ಅವಕಾಶವಿಲ್ಲ. ಟಿಪ್ಪು ನಗರದಲ್ಲಿ ಹಾಕಿರುವ ಟಿಪ್ಪು ಕಟೌಟ್‌ನ ಅಳತೆ, ಸ್ಥಳ, ಸಮಯ ಹಿಂದಿನ ವರ್ಷಗಳಂತೆಯೇ ಇದೆ. ಇನ್‌ಸ್ಟಾಗ್ರಾಮ್‌ನಲ್ಲಿ ಕಟೌಟ್‌ಗೆ ಆಕ್ಷೇಪಾರ್ಹ ಹಾಡು ಸೇರಿಸಿ ವೀಡಿಯೊ ವೈರಲ್ ಮಾಡಿರುವ ಪ್ರಕರಣ ಸಂಬಂಧ ಸುವೋಮೋಟೋ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 196, 299ರ ಅಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ವೀಡಿಯೊ ತಯಾರಿಸಿದವರು, ಹಂಚಿಕೊಂಡವರು ಹಾಗೂ ಸ್ಟೇಟಸ್ ಹಾಕಿದವರ ವಿರುದ್ಧ ತನಿಖೆ ನಡೆಸಿದ್ದು, ಆರೋಪಿಗಳನ್ನು ಪತ್ತೆ ಮಾಡಿ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ತಿಳಿಸಿದ್ದಾರೆ.

Tags

chikkamagaluruTipu Sultan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X