Chikkamagaluru | ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ 2 ಸಾವಿರ ಅಡಿಗಳಷ್ಟು ಆಳದ ಪ್ರಪಾತದಲ್ಲಿ ಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರಿನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ.
ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧಾರ ಪ್ರದೇಶದ ಸಮೀಪ ಸುಮಾರು 2 ಸಾವಿರ ಅಡಿಗಳಷ್ಟು ಆಳದ ಪ್ರಪಾತದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಕಳೆದ ಕೆಲವು ದಿನಗಳಿಂದ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವಾಸಕ್ಕೆ ಬಂದಿದ್ದಾಗಲೇ ಬಾಲಕಿ ನಾಪತ್ತೆಯಾಗಿದ್ದ ಹಿನ್ನೆಲೆ, ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕಿ ಪ್ರಪಾತಕ್ಕೆ ಬಿದ್ದ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
Next Story







