Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. Chikkamagaluru | ಬಿಜೆಪಿ...

Chikkamagaluru | ಬಿಜೆಪಿ ಜಿಲ್ಲಾಧ್ಯಕ್ಷ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ18 Aug 2026 11:26 PM IST
share
Chikkamagaluru | ಬಿಜೆಪಿ ಜಿಲ್ಲಾಧ್ಯಕ್ಷ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನಾ ಮೆರವಣಿಗೆಯ ವೇಳೆ ಅನುಮತಿ ಉಲ್ಲಂಘಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ಹಲವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕು ಕಚೇರಿಯಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಆಝಾದ್ ಪಾರ್ಕ್‌ವರೆಗೆ ಮಧ್ಯಾಹ್ನ 3ರ ಬಳಿಕ ಶಾಂತಿಯುತ ಪ್ರತಿಭಟನೆ ನಡೆಸಲು ಮಾತ್ರ ಪೊಲೀಸರು ಷರತ್ತುಬದ್ಧ ಅನುಮತಿ ನೀಡಿದ್ದರು. ಆದರೆ, ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಅಂದರೆ ಮಧ್ಯಾಹ್ನ 12:30ಕ್ಕೆ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ಆಝಾದ್ ಪಾರ್ಕ್ ತಲುಪುತ್ತಿದ್ದಂತೆ ಏಕಾಏಕಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸ್ಥಳದಲ್ಲಿದ್ದ ನಗರ ಠಾಣಾ ಪೊಲೀಸ್ ನಿರೀಕ್ಷಕ ಅಭಯಪ್ರಕಾಶ್ ಸೋಮನಾಳ, ಪಿಎಸ್ಸೈಗಳಾದ ಸುನೀತಾ, ಧನರಾಜ್ ಹಾಗೂ ಸಿಬ್ಬಂದಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಯತ್ನಿಸಿದರು. ಜಿಲ್ಲಾ ಪೊಲೀಸ್ ಕಚೇರಿ ಪಕ್ಕದ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ತಡೆದಾಗ, ಉದ್ರಿಕ್ತಗೊಂಡ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸರೊಂದಿಗೆ ತಳ್ಳಾಟ ನಡೆಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಪೊಲೀಸ್ ನಿರೀಕ್ಷಕ ಅಭಯಪ್ರಕಾಶ್ ಸೋಮನಾಳ ನೀಡಿದ ದೂರಿನನ್ವಯ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಪ್ರಮುಖರಾದ ಪುಷ್ಪರಾಜ್, ಜಯರಾಮ್, ಪುಟ್ಟಸ್ವಾಮಿ, ರವೀಂದ್ರ ಬೆಳವಾಡಿ, ಸಂತೋಷ್ ಕೋಟ್ಯಾನ್, ರಾಜೇಶ್, ಕೆ.ಪಿ. ವೆಂಕಟೇಶ್, ಸಚಿನ್ ಗೌಡ, ಜೀವನ್ ರಂಗನಾಥ್, ಕಬೀರ್, ಕೌಶಿಕ್, ಪುಣ್ಯಪಾಲ್, ನರೇಂದ್ರ, ಚಂಪಾ ಜಗದೀಶ್, ಭವ್ಯಾ ನಟೇಶ್, ಸಂಗೀತಾ ಪ್ರಸಾದ್, ಕಿಟ್ಟಿ, ರವಿ ಸೇರಿದಂತೆ 15 ರಿಂದ 20 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Tags

chikkamagaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X