Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮಾದಕ ವ್ಯಸನದ ವಿರುದ್ಧ ಸಮಗ್ರ ಜಾಗೃತಿ...

ಮಾದಕ ವ್ಯಸನದ ವಿರುದ್ಧ ಸಮಗ್ರ ಜಾಗೃತಿ ಅಗತ್ಯ: ಮಸೀಹುಝ್ಝಮಾ ಅನ್ಸಾರಿ

ವಾರ್ತಾಭಾರತಿವಾರ್ತಾಭಾರತಿ21 May 2026 3:48 PM IST
share
ಮಾದಕ ವ್ಯಸನದ ವಿರುದ್ಧ ಸಮಗ್ರ ಜಾಗೃತಿ ಅಗತ್ಯ: ಮಸೀಹುಝ್ಝಮಾ ಅನ್ಸಾರಿ
ತರೀಕೆರೆಯಲ್ಲಿ 'ಚಿಕ್ಕಮಗಳೂರು ಜಿಲ್ಲಾ ಯುವ ಸಮಾವೇಶ'

ಚಿಕ್ಕಮಗಳೂರು: ತರೀಕೆರೆ ಯುವ ಸಮಿತಿ ಹಾಗೂ ಸೋಲಿಡಾರಿಟಿ ಯೂತ್ ಮೂವ್ ಮೆಂಟ್, ತರೀಕೆರೆ ಘಟಕದ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ 'ಉತ್ತಮ ಸಮಾಜಕ್ಕಾಗಿ ಸಬಲ ಯುವಜನತೆ' ಎಂಬ ವಿಷಯದಡಿ ಚಿಕ್ಕಮಗಳೂರು ಜಿಲ್ಲಾ ಯುವ ಸಮಾವೇಶ ಆಯೋಜಿಸಲಾಗಿತ್ತು.

ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಯುವಜನ ಒಕ್ಕೂಟದ ಅಧ್ಯಕ್ಷ ಮಸೀಹುಝ್ಝಮಾ ಅನ್ಸಾರಿ, ಜೆಐಎಚ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ.ಸಾದ್ ಬೆಳಗಾಮಿ, ತರೀಕೆರೆಯ ಸಬ್ ಇನ್ ಸ್ಪೆಕ್ಟರ್ ಮಂಜುನಾಥ್ ಮಲ್ಲಂಗಿ ಹಾಗೂ ಎಸ್ ವೈಎಂ ಕರ್ನಾಟಕ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್ ಭಾಗವಹಿಸಿದ್ದರು.

ದಿಕ್ಸೂಚಿ ಭಾಷಣ ಮಾಡಿದ ಮಸೀಹುಝ್ಝಮಾ ಅನ್ಸಾರಿ, ಯುವಜನತೆ ಮಾದಕ ವ್ಯಸನದ ಬಲೆಗೆ ಸಿಲುಕುತ್ತಿರುವುದು ಸಮಾಜಕ್ಕೆ ದೊಡ್ಡ ಸವಾಲಾಗಿದ್ದು, ಇದರ ವಿರುದ್ಧ ಸಮಗ್ರ ಜಾಗೃತಿ ಅಗತ್ಯವಿದೆ ಎಂದು ತಿಳಿಸಿದರು.

ಮಂಜುನಾಥ್ ಮಲ್ಲಂಗಿ ಮಾತನಾಡಿ, ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳು ಪೋಷಕರನ್ನೇ ಅನುಕರಿಸುವುದರಿಂದ ಕುಟುಂಬದಲ್ಲಿ ನೈತಿಕ ಮೌಲ್ಯಗಳು ಬಲವಾಗಿರಬೇಕು ಎಂದು ಹೇಳಿದರು.

ಮಾದಕ ಪದಾರ್ಥಗಳ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಯುವಜನತೆ ಮಾದಕ ವ್ಯಸನ, ಆನ್ ಲೈನ್ ಗೇಮ್ ಹಾಗೂ ಆನ್ ಲೈನ್ ಜೂಜಿನಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು.

ಕಳೆದ ಒಂದು ವಾರದಿಂದ ಮಾದಕ ವ್ಯಸನ ಮತ್ತು ಜೂಜಿನ ವಿರುದ್ಧ ಜಾಗೃತಿ ಅಭಿಯಾನ ನಡೆಸಿ ಯುವ ಸಮಾವೇಶ ಆಯೋಜಿಸಿರುವ ತರೀಕೆರೆ ಯುವ ಸಮಿತಿ ಹಾಗೂ ಸೋಲಿಡಾರಿಟಿ ತಂಡದ ಕಾರ್ಯವನ್ನು ಶ್ಲಾಘಿಸಿದರು.

ಹಿರಿಯ ವೈದ್ಯ ಹಾಗೂ ಸೋಲಿಡಾರಿಟಿ ಯೂತ್ ಮೂವ್ ಮೆಂಟ್ ಕರ್ನಾಟಕದ ಮೇಲ್ವಿಚಾರಕ ಡಾ. ಸಾದ್ ಬೆಳಗಾಮಿ, ಮಾದಕ ವ್ಯಸನದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಯುವಜನತೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಿ ಆತ್ಮಹತ್ಯೆಗಳಂತಹ ದುರಂತಗಳಿಗೆ ತುತ್ತಾಗುತ್ತಿರುವುದು ವಿಷಾದಕರ ಸಂಗತಿ ಎಂದು ಹೇಳಿದರು.

ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ನಸೀಮ್ ಅಹ್ಮದ್, ಯುವಜನತೆ ದುಶ್ಚಟಗಳಿಂದ ದೂರವಿದ್ದು ನೈತಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.

ಧರ್ಮ, ಜಾತಿ ಭೇದವಿಲ್ಲದೆ ಸಮಾಜದ ಪ್ರತಿಯೊಬ್ಬ ಯುವಕನನ್ನೂ ಇಂತಹ ಕೆಡುಕುಗಳಿಂದ ರಕ್ಷಿಸುವುದು ನಮ್ಮೆಲ್ಲರ ಹೊಣೆಗಾರಿಕೆ. ಯುವಜನತೆ ದೇಶದ ಅಮೂಲ್ಯ ಆಸ್ತಿಯಾಗಿದ್ದು, ಅವರನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುವುದು ಅತ್ಯಗತ್ಯ ಎಂದು ಹೇಳಿದರು.

ಪ್ರವಾದಿ ಮುಹಮ್ಮದ್ (ಸ.) ಅವರು ತಮ್ಮ ಯೌವನದಲ್ಲಿ 'ಹಿಲ್ಫುಲ್ ಫಝೂಲ್' ಎಂಬ ಒಡಂಬಡಿಕೆಯ ಮೂಲಕ ವಿವಿಧ ಸಮುದಾಯದ ಜನರನ್ನು ಒಗ್ಗೂಡಿಸಿ ಅನ್ಯಾಯದ ವಿರುದ್ಧ ಹೋರಾಡಿದ ಉದಾಹರಣೆಯನ್ನು ಉಲ್ಲೇಖಿಸಿದ ಡಾ.ನಸೀಮ್ ಅಹ್ಮದ್, ಇಂದಿನ ಎಲ್ಲ ಯುವ ಸಂಘಟನೆಗಳೂ ಸಮಾಜದ ಕೆಡುಕುಗಳ ವಿರುದ್ಧ ಒಗ್ಗೂಡಿ ಹೋರಾಡಬೇಕು ಎಂದು ಹೇಳಿದರು.

ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಿದ ತರೀಕೆರೆ ಯುವ ಸಮಿತಿ ಹಾಗೂ ಸೋಲಿಡಾರಿಟಿ ಯೂತ್ ಮೂವ್ ಮೆಂಟ್ ತರೀಕೆರೆ ಘಟಕಕ್ಕೆ ಅಭಿನಂದನೆ ಸಲ್ಲಿಸಿದರು. ಮುಂದಿನ ಹಂತವಾಗಿ ಯುವಜನರನ್ನು ಮಾದಕ ವ್ಯಸನದಿಂದ ರಕ್ಷಿಸುವ ಉದ್ದೇಶದಿಂದ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್ ಮೆಂಟ್ ಕರ್ನಾಟಕದ ವತಿಯಿಂದ ಪ್ರಕಟಿಸಲಾದ 'ಡಿಜಿಟಲ್ ಸ್ವಾತಂತ್ರ್ಯ' ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

Tags

Chikkamagaluru District Youth Convention
share
ವಾರ್ತಾಭಾರತಿ
ವಾರ್ತಾಭಾರತಿ
Next Story
X