ಚಿಕ್ಕಮಗಳೂರು: ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇ.ಟಿ.ಎಫ್. ಸಿಬ್ಬಂದಿ !

ಚಿಕ್ಕಮಗಳೂರು.ಫೆ.22: ಮಲೆನಾಡು ಭಾಗದಲ್ಲಿ ಆನೆ ಹಾವಾಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್ ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ.
ಎನ್.ಆರ್.ಪುರ ತಾಲೂಕಿನಲ್ಲಿ ಇತ್ತಿಚೆಗೆ ಆನೆ ಹಾವಳಿ ಮಿತಿ ಮೀರಿದೆ. ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ. ಶುಕ್ರವಾರ ಕೂಡ ಸಾಲೂರು ಗ್ರಾಮದ ಕಾಫಿತೋಟಕ್ಕೆ ಬಂದಿದ್ದ ಆನೆಯೊಂದನ್ನು ಓಡಿಸಲು ಹೋಗಿದ್ದ ಇ.ಟಿ.ಎಫ್. ಸಿಬ್ಬಂದಿ ಮೇಲೆಯೇ ಆನೆ ದಾಳಿ ಮಾಡಲು ಮುಂದಾಗಿದೆ. ತಕ್ಷಣ ಎಚ್ಚೆತ್ತ ಇಟಿಎಫ್ ಸಿಬ್ಬಂದಿ ಮರವನ್ನೇರಿ ಕುಳಿತು ಜೀವ ಉಳಿಸಿಕೊಂಡಿದ್ದಾರೆ.
ಮರವೇರಿ ಕುಳಿತ ನಂತರವೂ ಕಾಡಾನೆ ಮರವನ್ನು ಅಲುಗಾಡಿಸಲು ಮುಂದಾಗಿದ್ದು, ಈ ದೃಶ್ಯವನ್ನು ಮರದ ಮೇಲೆ ಕುಳಿತುಕೊಂಡ ಆನೆ ನಿಗ್ರಹ ದಳದ ಸಿಬ್ಬಂದಿ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಆನೆ ದಾಳಿ ಹಾಗೂ ಹಾವಳಿಯಿಂದ ಕಂಗೆಟ್ಟಿರುವ ಜನರು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಆನೆ ಹಾವಾಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್ ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ. pic.twitter.com/lxJmxNiXCd
— ವಾರ್ತಾ ಭಾರತಿ | Vartha Bharati (@varthabharati) February 22, 2025







