Chikkamagaluru | ಎನ್.ಆರ್.ಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ಸಾಂದರ್ಭಿಕ ಚಿತ್ರ | PC : AI
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕಾಡಾನೆ ಮತ್ತು ಮಾನದ ಸಂಘರ್ಷ ತೀವ್ರಗೊಂಡಿದ್ದು, ಬೇಲೂರು, ಹಾಸನ, ಸಕಲೇಶಪುರ ಭಾಗದಲ್ಲಿ ಕಾಡಾನೆ ದಾಳಿಗೆ ಇತ್ತೀಚೆಗೆ ಇಬ್ಬರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಕಾಫಿನಾಡಿನಲ್ಲಿ ಕಾಡಾನೆಗಳ ಸ್ಥಳಾಂತರಕ್ಕೆ ರೈತರು ಆಗ್ರಹಿಸುತ್ತಿದ್ದಾರೆ. ಈ ಮಧ್ಯೆ ರೈತರೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತ ರೈತನನ್ನು ಎನ್.ಆರ್.ಪುರ ತಾಲೂಕಿನ ಬಾಳೆ ಗ್ರಾಪಂ ವ್ಯಾಪ್ತಿಯ ಹೆನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ(54) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೃಷ್ಣಮೂರ್ತಿ ಅವರು ದನಗಳನ್ನು ಹುಡುಕುತ್ತಾ ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿದ್ದ ಕಾಡಾನೆಯೊಂದು ಕೃಷ್ಣಮೂರ್ತಿ ಮೇಲೆ ಏಕಾಏಕಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story




