Chikkamagaluru | ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

ಸಾಂದರ್ಭಿಕ ಚಿತ್ರ | PC : Gemini AI
ಚಿಕ್ಕಮಗಳೂರು : ಕಾಡಾನೆ ದಾಳಿಗೆ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ತಿರುವಳ್ಳಿ ಮೂಲದ ಯಲ್ಲಪ್ಪ (45) ಎಂದು ಗುರುತಿಸಲಾಗಿದೆ. ತೋಟದ ಹಾದಿಯಲ್ಲಿ ಮನೆಗೆ ಹೋಗುವಾಗ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಸರಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
Next Story




