ಚಿಕ್ಕಮಗಳೂರು: ಎಸಿಎಫ್ ಶ್ರೀನಿವಾಸ್ ಮನೆ ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

ಚಿಕ್ಕಮಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ (A.C.F) ಕರ್ತವ್ಯ ನಿರ್ವಹಿಸುತ್ತಿರುವ ಶ್ರೀನಿವಾಸ್ ಅವರ ಮನೆ ಮತ್ತು ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ ತೀವ್ರ ಪರಿಶೀಲನೆ ಕೈಗೊಂಡಿದ್ದಾರೆ.
ತಮ್ಮ ಇಲಾಖೆಯ ಅಧಿಕಾರ ಅವಧಿಯಲ್ಲಿ ಅಕ್ರಮ ವ್ಯವಹಾರಗಳ ಮೂಲಕ ಅಪಾರ ಪ್ರಮಾಣದ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್‌ನಲ್ಲಿರುವ ಅವರ ಮುಖ್ಯ ನಿವಾಸ ಮಾತ್ರವಲ್ಲದೆ, ಕಡೂರಿನಲ್ಲಿರುವ ಅವರ ತಂಗಿಯ ಮನೆ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯ ಪ್ರಗತಿಯಲ್ಲಿದೆ.
ಲೋಕಾಯುಕ್ತ ಡಿ.ವೈ.ಎಸ್.ಪಿ ತಿರುಮಲೇಶ್ ಹಾಗೂ ಅವರ ಸಿಬ್ಬಂದಿ ವರ್ಗದವರು ಈ ಮಹತ್ವದ ದಾಳಿಯ ನೇತೃತ್ವ ವಹಿಸಿದ್ದು, ದಾಖಲೆಗಳ ಪರಿಶೀಲನೆಯನ್ನು ಮುಂದುವರಿಸಿದ್ದಾರೆ.
Next Story




