Chikkamagaluru | ಸಚಿವ ಕೆ.ಜೆ.ಜಾರ್ಜ್ ರ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು: ಬರ ವೀಕ್ಷಣೆಗೆ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರವಾಸದಲ್ಲಿರುವ ಸಚಿವ ಕೆ.ಜೆ.ಜಾರ್ಜ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ.
ಸಚಿವರು ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಸಚಿವರ ಬೆಂಗಾವಲು ವಾಹನನ ಅಮೃತ್ ಮಹಲ್ ಸಂವರ್ಧನ ತಳಿ ಕೇಂದ್ರದ ಗೇಟ್ ಗೆ ಢಿಕ್ಕಿ ಹೊಡೆದಿದೆ. ಈ ಪೊಲೀಸ್ ಜೀಪ್ ಸಚಿವರ ಕಾರಿನ ಮುಂಭಾಗದಲ್ಲಿ ಚಲಿಸುತ್ತಿತ್ತು.
ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಪೊಲೀಸ್ ಜೀಪಿನ ಮುಂಭಾಗ ಹಾನಿಗೀಡಾಗಿದೆ.
Next Story






