ಚಿಕ್ಕಮಗಳೂರು | ಮಂಗ ದಾಳಿ : ಮಹಿಳೆಗೆ ಗಾಯ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಚಿಕ್ಕಮಗಳೂರು ತಾಲೂಕಿನ ಸಾಂತವೇರಿ ಗ್ರಾಮದಲ್ಲಿ ಮಂಗದ ದಾಳಿಯಿಂದ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಮನೆಯೊಳಗೆ ಕೆಲಸ ಮಾಡುತ್ತಿದ್ದ ವೇಳೆ ಮಂಗ ಆಕಸ್ಮಿಕವಾಗಿ ನುಗ್ಗಿ ಮಹಿಳೆಯ ಕೈ ಹಾಗೂ ಮುಖದ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ. ಗಾಯಗೊಂಡ ಪೂಜಾ ಅವರನ್ನು ತಕ್ಷಣ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮಸ್ಥರು ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Next Story





