ಚಿಕ್ಕಮಗಳೂರು | ಕ್ಯಾಂಟರ್-ಬಸ್ ನಡುವೆ ಭೀಕರ ರಸ್ತೆ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು : ಕ್ಯಾಂಟರ್ ವಾಹನ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ಲೂರು ಗೇಟ್ ಸಮೀಪ ಕ್ಯಾಂಟರ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕ್ಯಾಂಟರ್ ಚಾಲಕ ಮೋಹನ್(30), ಕ್ಲೀನರ್ ಮುಹಮ್ಮದ್ ಆಸಿಫ್(40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೀರೂರು ಠಾಣೆಯ ಪಿಎಸ್‌ಐ ತಿಪ್ಪೇಶ್ ನಾಯ್ಕ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು. ಗಾಯಾಳುಗಳನ್ನು ಕಡೂರು ಮತ್ತು ಬೀರೂರು ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





