Chikkamagaluru | ನಿಶ್ಚಿತಾರ್ಥ ಆಗಿದ್ದ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಕಳೆದ ಒಂದು ತಿಂಗಳ ಹಿಂದಷ್ಟೆ ಮದುವೆ ನಿಶ್ಚಯವಾಗಿ ನಿಶ್ಚಿತಾರ್ಥವೂ ಆಗಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಅಭಿಷೇಕ್ (25) ಮೃತ ಯುವಕನಾಗಿದ್ದು, ಈತನಿಗೆ ಕಳೆದ ತಿಂಗಳಷ್ಟೆ ಮದುವೆ ನಿಶ್ವಯವಾಗಿತ್ತು. ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕವೂ ನಿಗದಿಪಡಿಸಲಾಗಿತ್ತು.
ಹುಡುಗ ಮತ್ತು ಹುಡುಗಿ ಮನೆಯವರು ಮದುವೆ ಸಿದ್ದತೆ ಮಾಡಿಕೊಳ್ಳುತ್ತಿದ್ದರು. ಅಭಿಷೇಕ್ ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಕೂಡಲೇ ಆತನನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಅಭಿಷೇಕ್ ಮೃತಪಟ್ಟಿದ್ದಾನೆ.
ಅಭಿಷೇಕ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




