Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಮಳೆಯಿಂದ ಕುಸಿದ ಅನಧೀಕೃತ...

ಚಿಕ್ಕಮಗಳೂರು | ಮಳೆಯಿಂದ ಕುಸಿದ ಅನಧೀಕೃತ ಮನೆಗಳಿಗೆ 1 ಲಕ್ಷ ರೂ. ಪರಿಹಾರ : ಸಚಿವ ಕೆ.ಜೆ.ಜಾರ್ಜ್

"ಮಲೆನಾಡು ಭಾಗದಲ್ಲಿ ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ"

ವಾರ್ತಾಭಾರತಿವಾರ್ತಾಭಾರತಿ28 July 2024 8:12 PM IST
share
ಚಿಕ್ಕಮಗಳೂರು | ಮಳೆಯಿಂದ ಕುಸಿದ ಅನಧೀಕೃತ ಮನೆಗಳಿಗೆ 1 ಲಕ್ಷ ರೂ. ಪರಿಹಾರ : ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು : ಮಳೆಯಿಂದ ಕುಸಿದಿರುವ ಪ್ರತೀ ಮನೆಗಳಿಗೆ 1.20ಲಕ್ಷ ರೂ.ಪರಿಹಾರ ನೀಡಲಾಗುತ್ತಿದೆ. ಅನಧೀಕೃತ ಮನೆಗಳಿಗೆ 1ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಕಲಸ ತಾಲೂಕು ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಜೆ.ಜಾರ್ಜ್, "ಈ ಬಾರಿ ಭಾರೀ ಮಳೆಯೊಂದಿಗೆ ತೀವ್ರ ಸ್ವರೂಪದ ಗಾಳಿ ಬೀಸಿದ ಪರಿಣಾಮ ಜಿಲ್ಲಾದ್ಯಂತ ಸುಮಾರು 300ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಮಲೆನಾಡು ಭಾಗದಲ್ಲಿ ಹೆಚ್ಚು ಮನೆಗಳು ಕುಸಿದಿದ್ದು, ಸಂಪೂರ್ಣವಾಗಿ ಕುಸಿದ ಮನೆಗಳಿಗೆ ಈಗಾಗಲೇ 1.20ಲಕ್ಷ ರೂ.ನಂತೆ ಪರಿಹಾರ ನೀಡಲಾಗಿದೆ. ಭಾಗಶಃ ಕುಸಿದ ಮನೆಗಳಿಗೆ ಸರಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡಲಾಗಿದೆ. ಕುಸಿದ ಮನೆಗಳ ನಿರ್ಮಾಣಕ್ಕೆ 1.20 ಲಕ್ಷ ಪರಿಹಾರದೊಂದಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಒದಗಿಸಲಾಗುವುದು" ಎಂದು ಹೇಳಿದರು.

ಅರಣ್ಯ ಹಾಗೂ ಡೀಮ್ಸ್ ಅರಣ್ಯದಂತಹ ಪ್ರದೇಶದಲ್ಲಿ ಹಕ್ಕುಪತ್ರ, ದಾಖಲೆಗಳಿಲ್ಲದ ಅನಧೀಕೃತ ಮನೆಗಳಿಗೆ ಮಳೆಯಿಂದ ಹಾನಿಯಾಗಿದ್ದರೆ ಅಂತಹ ಮನೆಗಳಿಗೂ ಪರಿಹಾರ ನೀಡಲು ಸರಕಾರ ಕ್ರಮ ಕೈಗೊಂಡಿದೆ. ಸಂಪೂರ್ಣ ಹಾನಿಯಾದ ಪ್ರತೀ ಅನಧೀಕೃತ ಮನೆಗೆ 1ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ನಿರ್ಣಯಕೈಗೊಂಡಿದ್ದು, ಈ ಸಂಬಂಧ ಹಣಕಾಸು ಇಲಾಖೆಯ ಮುಖ್ಯ ಕಾರ್ಯದರ್ಶಿ ಶೀಘ್ರ ಆದೇಶ ಹೊರಡಿಸಲಿದ್ದು, ಬಳಿಕ ಪರಿಹಾರ ವಿತರಣೆ ಆಗಲಿದೆ ಎಂದರು.

ಮೆಸ್ಕಾಂ ಇಲಾಖೆಗೆ ಭಾರೀ ನಷ್ಟ :

ಮಳೆ, ಗಾಳಿಯಿಂದಾಗಿ ಈ ಬಾರಿ ಮೆಸ್ಕಾಂ ಇಲಾಖೆಗೆ ಭಾರೀ ನಷ್ಟವಾಗಿದೆ. ಈ ಬಾರೀ ತೀವ್ರ ಗಾಳಿಯಿಂದಾಗಿ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಮಲೆನಾಡಿನಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೂರಾರು ಗ್ರಾಮಗಳು ಕತ್ತಲೆಯಲ್ಲಿ ಮುಳುಗಿದ್ದು, ವಿದ್ಯುತ್ ಸಂಪರ್ಕ ಮರುಸ್ಥಾಪನೆಗಾಗಿ ಮೆಸ್ಕಾಂ ಇಲಾಖೆ ಅಧಿಕಾರಿ, ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.

ಮಲೆನಾಡು ಗುಡ್ಡಗಾಡು ಪ್ರದೇಶ ಆಗಿರುವುದರಿಂದ ವಿದ್ಯುತ್ ಕಂಬಗಳ ಬದಲಾವಣೆ ಕೆಲಸಕ್ಕೆ ಕಾಲಾವಕಾಶ ಬೇಕು. ಸದ್ಯ ಈ ಕೆಲಸಕ್ಕೆ ಮಲೆನಾಡು ಭಾಗದಲ್ಲಿ ಸಿಬ್ಬಂದಿ ಕೊರತೆ ಇತ್ತು. ಕೇವಲ 500 ಮಂದಿ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಇದನ್ನು ಮನಗಂಡು ಶೀಘ್ರ ವಿದ್ಯುತ್ ಸಂಪರ್ಕ ಮರುಸ್ಥಾಪನೆ ಮಾಡಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸದ್ಯ 900ಕ್ಕೂ ಹೆಚ್ಚು ಮೆಸ್ಕಾಂ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಳೆ, ಗಾಳಿಯಿಂದಾಗಿ ಸಾರ್ವಜನಿಕ ಆಸ್ತಿಗಳಲ್ಲದೇ ಮನೆಗಳು, ಕೃಷಿ, ತೋಟಗಾರಿಕೆ ಬೆಳೆಗಳಿಗೂ ಹಾನಿಯಾಗಿದೆ. ಈ ಹಾನಿ ಸಂಬಂಧ ಸಮೀಕ್ಷೆ ಕೆಲಸ ನಡೆಯುತ್ತಿದ್ದು, ಹಾನಿಯ ವರದಿಯನ್ನು ಶೀಘ್ರ ತಯಾರಿಸಿ ಸರಕಾರಕ್ಕೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಹೆಚ್ಚುವರಿ ಅನುದಾನ ಬಿಡುಗಡೆಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದು ಎಂದರು.

ಆಲ್ದೂರು ಹೋಬಳಿ ವ್ಯಾಪ್ತಿಯ ಅರೇನೂರು ಗ್ರಾಮದಲ್ಲಿ ಭೂ ಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಸಂತ್ರಸ್ಥರಿಗೆ ಬೇರೆಡೆ ನಿವೇಶನ, ಮನೆ ಒದಗಿಸಲು ಕ್ರಮವಹಿಸಲಾಗುವುದು ಎಂದು ಇದೇ ವೇಳೆ ಸಚಿವ ಜಾರ್ಜ್ ಭರವಸೆ ನೀಡಿದರು.

ಈ ವೇಳೆ ವಿಪ ಉಪಸಭಾಪತಿ ಪ್ರಾಣೇಶ್, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್ಪಿ, ಡಾ.ವಿಕ್ರಮ್ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X