ಚಿಕ್ಕಮಗಳೂರು | ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: 3 ಹಸುಗಳು ಸಾವು

ಚಿಕ್ಕಮಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಸ್ಪರ್ಶಕ್ಕೆ ಒಳಗಾಗಿ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬವರಿಗೆ ಸೇರಿದ ಮೂರು ಜರ್ಸಿ ಹಸಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ.
ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಆಕಸ್ಮಿಕ ವಿದ್ಯುತ್ ತಗುಲಿ ಹಸುಗಳು ಅಸುನೀಗಿವೆ ಎಂದು ಹೇಳಲಾಗುತ್ತಿದೆ. ಇದರಿಂದ ಎರಡು ಲಕ್ಷ ರೂ.ಗೂ ಅಧಿಕ ನಷ್ಟವುಂಟಾಗಿದೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರಿಗೆ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Next Story





