ಚಿಕ್ಕಮಗಳೂರು | ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಮೃತ್ಯು

ಚಿಕ್ಕಮಗಳೂರು : ಸೆಲ್ಫಿ ತೆಗೆಯಲು ಹೋದ ಯುವಕನೊರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ.
ಮೃತ ಯುವಕನನ್ನು ಬೆಳಗಾವಿ ಮೂಲದ ಚಿಕ್ಕಮಗಳೂರಿನ ಎಐಟಿ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿ ವರುಣ್ ದೇಸಾಯಿ (19) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ 2 ಬೈಕಿನಲ್ಲಿ ಐವರು ಸ್ಮೇಹಿತರು ಜಲಪಾತ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಘಟನೆ ನಡೆದಿದೆ. ಸೆಲ್ಫಿ ತೆಗೆಯುವ ವೇಳೆ ವರುಣ್ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ನಂತರ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದ್ದು, ಇಂದು ಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿದೆ.
ಘಟನೆಯ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





