Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಸೂಲಿಬೆಲೆ ಭಾಷಣಕ್ಕೆ...

ಚಿಕ್ಕಮಗಳೂರು | ಸೂಲಿಬೆಲೆ ಭಾಷಣಕ್ಕೆ ಅಡ್ಡಿ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರಿಂದ ಪರಸ್ಪರ ಕಲ್ಲುತೂರಾಟ

ವಾರ್ತಾಭಾರತಿವಾರ್ತಾಭಾರತಿ8 Feb 2024 9:46 PM IST
share
ಚಿಕ್ಕಮಗಳೂರು | ಸೂಲಿಬೆಲೆ ಭಾಷಣಕ್ಕೆ ಅಡ್ಡಿ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರಿಂದ ಪರಸ್ಪರ ಕಲ್ಲುತೂರಾಟ

ಚಿಕ್ಕಮಗಳೂರು: ನಮೋ ಬ್ರೀಗೆಡ್ ವತಿಯಿಂದ ನಗರದಲ್ಲಿ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ʼನಮೋ ಭಾರತ್ 2.0ʼ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣದ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಸಮಾರಂಭದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದಲ್ಲದೇ ಕಾಂಗ್ರೆಸ್ ಕಾರ್ಯಕರ್ತರು, ಚಕ್ರವರ್ತಿ ಸೂಲಿಬೆಲೆ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ, ಪರಸ್ಪರ ಕಲ್ಲು ತೂರಾಟ ನಡೆದ ಘಟನೆ ನಡೆಯಿತು.

ಗುರುವಾರ ಸಂಜೆ ನಮೋ ಬ್ರಿಗೇಡ್ ವತಿಯಿಂದ ನಗರದ ವಿಜಯಪುರ ಬಡಾವಣೆಯ ಮೈದಾನದಲ್ಲಿ ʼನಮೋ ಭಾರತ್ 2.0ʼ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದರು. ಕಾರ್ಯಕ್ರಮ ಆರಂಭವಾಗಿ ಚಕ್ರವರ್ತಿ ಸೂಲಿಬೆಲೆ ಭಾಷಣ ಆರಂಭಿಸುತ್ತಿದ್ದಂತೆ ಸ್ಥಳದಲ್ಲಿದ್ದ ಕೆಲ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಭಾಷಣಕ್ಕೆ ಅಡ್ಡಿಪಡಿಸಿದರು. ಕೆಲ ಕಾರ್ಯಕರ್ತರು ಸೂಲಿಬೆಲೆ ಬಗ್ಗೆ ವ್ಯಂಗ್ಯದ ಬರಹವಿದ್ದ ಬ್ಯಾನರ್ ಪ್ರದರ್ಶಿಸಿದರು. ದಿಢೀರ್ ನಡೆದ ಬೆಳವಣಿಗೆಯಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಕಾಂಗ್ರೆಸ್ ಮುಖಂಡರು ಸೂಲಿಬೆಲೆ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಭಾರತ ಮಾತಾಕೀ ಜೈಕಾರ ಮೊಳಗಿಸಿದರು ಎನ್ನಲಾಗಿದೆ.

ಈ ವೇಳೆ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈಮಿಲಾಯಿಸುವ ಹಂತಕ್ಕೆ ತಲುಪಿತು. ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟವನ್ನೂ ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆಗೆ ಮುಂದಾದ 10ರಿಂದ 15 ಜನ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ ಬಳಿಕ ಚಕ್ರವತಿ ಸೂಲಿಬೆಲೆ ತಮ್ಮ ಭಾಷಣವನ್ನು ಮತ್ತೆ ಆರಂಭಿಸಿದರು.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಖಂಡಿಸಿದ ಚಕ್ರವರ್ತಿ ಸೂಲಿಬೆಲೆ, ರಾಜ್ಯ ಸರಕಾರ ನನ್ನನ್ನು ಜೈಲಿಗೆ ಕಳಿಸಬೇಕೆಂದು ಹರಸಾಹಸ ಪಡುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಉದ್ದೇಶಪೂರ್ವಕವಲ್ಲದ ಹೇಳಿಕೆ ನೀಡಿದಾಗ ನನ್ನ ಮೇಲೆ ಜಾತಿನಿಂಧನೆ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯ ಕಾಂಗ್ರೆಸ್‍ನವರಿಗೆ ಚೀಮಾರಿ ಹಾಕಿತು ಎಂದು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಎಸೆಸೆಲ್ಸಿ ಪರೀಕ್ಷೆ ಸಂಬಂಧ ಶುಕ್ರವಾರ ಪರೀಕ್ಷಾ ಅವಧಿಯನ್ನು ಬದಲಾವಣೆ ಮಾಡಲಾಗಿದೆ ಏಕೆ?, ಕೆಲವರು ಪ್ರಾರ್ಥನೆ ಸಲ್ಲಿಸಲು ಬದಲಾವಣೆ ಮಾಡಲಾಗಿದೆ ಎಂದಿದ್ದಕ್ಕೆ ಸಚಿವ ಮಧು ಬಂಗಾರಪ್ಪ ನನ್ನ ಮೇಲೆ ಹರಿಹಾಯ್ದರು. ನನ್ನನ್ನು ಒಳಗೆ ಹಾಕಿಸುತ್ತೇನೆ ಎಂದರು. ನಮೋ ಬ್ರೀಗೆಡ್ ಮುಂದಿನ 30 ದಿನಗಳಲ್ಲಿ 50 ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಹೇಗಾದರೂ ಮಾಡಿ ಗಲಾಟೆ ಸೃಷ್ಟಿಸಿ ಕಾರ್ಯಕ್ರಮವನ್ನು ರದ್ದುಪಡಿಸಬೇಕೆಂಬುದು ಸರಕಾರದ ಉದ್ದೇವಾಗಿದೆ ಎಂದು ಸರಕಾರದ ವಿರುದ್ಧ ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X